ಈ ಬಾರಿ ಮುಂಗಾರು ಮಳೆ ಎಲ್ಲೆಡೆ ಕೈ ಕೊಟ್ಟಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಸರ್ಕಾರ ತಯಾರಿ ನಡೆಸಿದೆ. ಹೆಚ್ಚಿನ ಕಡೆ ಮಳೆ ಇಲ್ಲದೆ ಬೆಳೆಯೂ ಬಂದಿಲ್ಲ. ಹಾಗೆ ಬೆಂಗಳೂರಲ್ಲಿ ಈ ತಿಂಗಳು ಕೇವಲ 12.2 ಮಿಮೀ ಮಳೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಸುರಿದ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.
ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮೀರುತ್ತಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಆಗಸ್ಟ್ 30ರಂದು 32.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಆಗಸ್ಟ್ ತಿಂಗಳಲ್ಲಿ ಸಾರ್ವಕಾಲಿಕ ಗರಿಷ್ಠ ತಾಪಮಾನ 33.3 ಡಿಗ್ರಿ ಸೆಲ್ಸಿಯಸ್ ಆಗಸ್ಟ್ 6, 1899 ರಂದು ದಾಖಲಾಗಿತ್ತು. ಜೊತೆಗೆ ಬೆಂಗಳೂರಲ್ಲಿ ಈ ತಿಂಗಳು ಕೇವಲ 12.2 ಮಿಮೀ ಮಳೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಸುರಿದ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ನಗರದಲ್ಲಿ 364.2 ಮಿ.ಮೀ ಮಳೆ ದಾಖಲಾಗಿತ್ತು. ಈ ವರ್ಷ ಜೂನ್ 1 ರಿಂದ ಬೆಂಗಳೂರಿನಲ್ಲಿ 226 ಮಿಮೀ ಮಳೆ ದಾಖಲಾಗಿದೆ. ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ರವರೆಗೆ ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನ ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆಯಲ್ಲಿ ತಿಳಿಸಿದೆ. ಆದರೆ ಮಳೆ ಬಂದ ಮೇಲೆ ಬಂತು…!. ಹವಾಮಾನ ಬದಲಾವಣೆ ಅನ್ನೋದು ಯಾವ ರೀತಿಯಲ್ಲಿ ಬೇಕಾದರು ಆಗಬಹುದು. ಮೋಡ ಇದ್ದರೂ ಮಳೆಯಾಗುತ್ತಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಆಗಬೇಕಾದ ಮಳೆಯೂ ಇಲ್ಲವಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…