ದೇವಸ್ಥಾನಗಳಲ್ಲಿ ಇನ್ನು ಮುಂದೆ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದೆ.
ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದೇ ರೀತಿಯಲ್ಲಿ ಈಗ ವಿವಿಧ ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ರಾಜ್ಯ ಸರ್ಕಾರವೂ ನಿರ್ಬಂಧವನ್ನು ವಿಧಿಸಿದೆ.
ಹೀಗಾಗಿ ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು , ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ ಹೆಚ್ಚಿನ ಡೆಸಿಬಲ್ ಶಬ್ದ ಹೊರಸೂಸದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಅತಿಯಾದ ಶಬ್ದ ಬಂದರೆ ಇವುಗಳನ್ನು ಬಳಕೆ ಮಾಡದಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel