ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್ ಪಡೆದುಕೊಳ್ಳಲು ಭಕ್ತರು ಟಿಕೆಟ್ ಕೌಂಟರ್ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…