#HeavyRain | ಉತ್ತರದಲ್ಲಿ ಮೇಘ ಸ್ಫೋಟ | ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ | 9 ಮಂದಿ ಬಲಿ | ಹಲವರು ಸಿಲುಕಿರುವ ಶಂಕೆ

August 14, 2023
12:32 PM
ಭಾರೀ ಮಳೆಯಿಂದಾಗಿ ಶಿಮ್ಲಾದಲ್ಲಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ

ಕಳೆದ ತಿಂಗಳು ಭಾರಿ ಮಳೆಗೆ ತ್ತರಿಸಿದ್ದ ಉತ್ತರಭಾರತದಲ್ಲಿ ಆಮೇಲೆ ವರುಣ ಕೊಂಚ ಬಿಡುವು ನೀಡಿತ್ತು. ಆದರೆ ಇದೀಗ ಮತ್ತೆ ತನ್ನ ಪ್ರತಾಪವನ್ನು ತೋರುತ್ತಿದೆ. ಭಾರೀ ಮಳೆಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯವೊಂದು ಕುಸಿದು ಬಿದ್ದಿದ್ದುಅವಶೇಷಗಳಡಿ ಸಿಲುಕಿ ಹಲವರ ಸಾವಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.

Advertisement
Advertisement

ಭಾರೀ ಮಳೆಯಿಂದಾಗಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರ್ಘಟನೆಯ ಸಂದರ್ಭ ದೇವಾಲಯದ ಆವರಣದಲ್ಲಿ ಸುಮಾರು 50 ಜನರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್‌ನಲ್ಲಿರುವ ಶಿವ ಮಂದಿರ ಕುಸಿದು ಬಿದ್ದಿದೆ. ಸದ್ಯಕ್ಕೆ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯ ಆಡಳಿತವು ಅವಶೇಷವನ್ನು ತೆರವುಗೊಳಿಸಲು ಹಾಗೂ ಸಿಲುಕಿರುವವರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ ಸೋಲನ್‌ನ ಹಳ್ಳಿಯೊಂದರಲ್ಲಿ ಮೇಘಸ್ಫೋಟವಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿವೆ. 6 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.

Source: PTI

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ
May 21, 2025
10:31 PM
by: The Rural Mirror ಸುದ್ದಿಜಾಲ
ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ
May 21, 2025
10:25 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ
May 21, 2025
10:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group