ಕಳೆದ ತಿಂಗಳು ಭಾರಿ ಮಳೆಗೆ ತ್ತರಿಸಿದ್ದ ಉತ್ತರಭಾರತದಲ್ಲಿ ಆಮೇಲೆ ವರುಣ ಕೊಂಚ ಬಿಡುವು ನೀಡಿತ್ತು. ಆದರೆ ಇದೀಗ ಮತ್ತೆ ತನ್ನ ಪ್ರತಾಪವನ್ನು ತೋರುತ್ತಿದೆ. ಭಾರೀ ಮಳೆಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯವೊಂದು ಕುಸಿದು ಬಿದ್ದಿದ್ದುಅವಶೇಷಗಳಡಿ ಸಿಲುಕಿ ಹಲವರ ಸಾವಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಭಾರೀ ಮಳೆಯಿಂದಾಗಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರ್ಘಟನೆಯ ಸಂದರ್ಭ ದೇವಾಲಯದ ಆವರಣದಲ್ಲಿ ಸುಮಾರು 50 ಜನರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್‌ನಲ್ಲಿರುವ ಶಿವ ಮಂದಿರ ಕುಸಿದು ಬಿದ್ದಿದೆ. ಸದ್ಯಕ್ಕೆ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯ ಆಡಳಿತವು ಅವಶೇಷವನ್ನು ತೆರವುಗೊಳಿಸಲು ಹಾಗೂ ಸಿಲುಕಿರುವವರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ ಸೋಲನ್‌ನ ಹಳ್ಳಿಯೊಂದರಲ್ಲಿ ಮೇಘಸ್ಫೋಟವಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿವೆ. 6 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.
Source: PTI
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…