ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…