ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್ – ಅರ್ಜಿ ಆಹ್ವಾನ

August 25, 2025
9:01 PM

2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸಬಹುದು.

Advertisement
Advertisement

ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ (ರಸ್ತೆ, ಕಟ್ಟಡ ಇತ್ಯಾದಿ ವಿವರ) ನೀಲಿ ನಕ್ಷೆ , ಅರ್ಜಿದಾರರ ಭಾವಚಿತ್ರ,  ಪ್ರಸ್ತಾವಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (100 ರೂ ಸ್ಟಾಂಪ್ ಪೇಪರ್ ), ಸರಕಾರಿ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೂ.200 ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರುಮಾಡುವ ಸಂದರ್ಭದಲ್ಲಿ ರೂ 500  ಲೈಸೆನ್ಸ್ ಶುಲ್ಕವನ್ನು ಪಾವತಿಸಬೇಕು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಅರ್ಜಿದಾರರು ಈ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ ನಿರಾಕ್ಷೇಪಣಾ ಪತ್ರ, ಪೊಲೀಸ್ ಅಧೀಕ್ಷಕರ ನಿರಾಕ್ಷೇಪಣಾ ಪತ್ರ, ಸಂಬಂಧಪಟ್ಟ ತಹಶೀಲ್ದಾರರ ನಿರಾಕ್ಷೇಪಣಾ ಪತ್ರ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ನಿರಾಕ್ಷೇಪಣಾ ಪತ್ರ ಪಡೆದು ಸಲ್ಲಿಸಬೇಕು. ಕಡ್ಡಾಯವಾಗಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿರುತ್ತದೆ. ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ ಸ್ಫೋಟಕ ಕಾಯಿದೆ/ನಿಯಮಾವಳಿಗಳಿಗೆ ಒಳಪಟ್ಟು ಪರವಾನಿಗೆ ಮಂಜೂರು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror