ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಪೆಂಡಾಲ್ ಕುಸಿದು ಬಿದ್ದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಆವರಣದಲ್ಲಿ ನಡೆದಿದೆ.
ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೂರು ದಿನಗಳ ಕಾಲ ಬೇಕೂರು ಸರಕಾರಿ ಹಯಾರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಇಂದು ಈ ಅವಘಡ ನಡೆದಿದೆ.
ಈ ಕಾರ್ಯಕ್ರಮಕ್ಕಾಗಿ ತಾತ್ಕಾಲಿಕವಾಗಿ ಶೀಟ್ ಹೊದಿಸಿ ಹಾಕಿದ್ದ ಪೆಂಡಾಲ್ ಮಧ್ಯಾಹ್ನ ಸಂಪೂರ್ಣವಾಗಿ ಕುಸಿದು ಬಿದ್ದು ಈ ಅನಾಹುತ ಸಂಭವಿಸಿದೆ.
ಈ ಘಟನೆಯಲ್ಲಿ 43 ಮಕ್ಕಳು ಹಾಗೂ ನಾಲ್ವರು ಶಿಕ್ಷಕರು ಗಾಯಗೊಂಡಿದ್ದಾರೆ. ಅವರನ್ನು ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…