Advertisement
ಪ್ರಮುಖ

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

Share

ದೇಶದ ಪ್ರಮುಖ ತೆಂಗಿನ ನೀರು ಉತ್ಪಾದನಾ ಪ್ರದೇಶವಾದ “ಭಾರತದ ತೆಂಗಿನ ನಗರಿ” ಎಂದು ಕರೆಯಲ್ಪಡುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಎಳನೀರು  ಉತ್ಪಾದನೆ ಸುಮಾರು 40% ಕುಸಿದಿದೆ. ಇದರ ಪರಿಣಾಮವಾಗಿ ಪೂರೈಕೆ ಪ್ರಮಾಣವೂ ಸುಮಾರು 50% ಇಳಿಕೆಯಾಗಿದೆ ಎಂದು The Times of India ವರದಿ ಮಾಡಿದೆ.  ಈ ಪ್ರದೇಶವು ಸಾಮಾನ್ಯವಾಗಿ ದೇಶದ ವಿವಿಧ ಭಾಗಗಳು ಮತ್ತು ವಿದೇಶಗಳಿಗೆ ಎಳನೀರು  ರಫ್ತು ಮಾಡುವ ಪ್ರಮುಖ ಕೇಂದ್ರವಾಗಿದ್ದು, ಇತ್ತೀಚಿನ ಉತ್ಪಾದನಾ ಕುಸಿತದಿಂದ ರೈತರು, ವ್ಯಾಪಾರಿಗಳು ಹಾಗೂ ರಫ್ತುದಾರರು ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ಸ್ಥಳೀಯ ರೈತರ ಪ್ರಕಾರ, ಕಳೆದ ಬಾರಿ ಸುರಿಸ ಮಳೆ, ಆ ಬಳಿಕದ ಚಳಿ  ಹಾಗೂ ಹವಾಮಾನದಲ್ಲಿ ಉಂಟಾದ ಬದಲಾವಣೆಗಳು ಬೆಳೆ ಚಕ್ರದ ಮೇಲೆ ಪರಿಣಾಮ ಬೀರಿವೆ. ಇದರ ಪರಿಣಾಮವಾಗಿ ತೆಂಗಿನ ಕಾಯಿ ಬೆಳೆಯುವ ಅವಧಿ ಬದಲಾಗಿದೆ.

ಹಿಂದೆ ನವೆಂಬರ್–ಡಿಸೆಂಬರ್ ತಿಂಗಳಲ್ಲಿ ದಿನಕ್ಕೆ ಸುಮಾರು 6 ಲಕ್ಷ ಎಳನೀರು  ಪೂರೈಕೆ ಆಗುತ್ತಿದ್ದರೆ, ಈಗ ಅದು 3 ಲಕ್ಷಕ್ಕೆ ಇಳಿದಿದೆ. ಫೆಬ್ರವರಿ ಅಂತ್ಯ–ಮಾರ್ಚ್ ವೇಳೆಗೆ ಇದು 2 ಲಕ್ಷಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಉತ್ಪಾದನೆ ಕುಸಿತದಿಂದ ಸ್ಥಳೀಯ ಮಾರುಕಟ್ಟೆಗಳಲ್ಲಿ ಸರಬರಾಜು ಕಡಿಮೆಯಾಗಿದ್ದು,ಹಲವು ಪ್ರದೇಶಗಳಲ್ಲಿ ಎಳನೀರು  ಬೆಲೆ ಏರಿಕೆಯಾಗಿದೆ. ಪ್ರಸ್ತುತ ದೇಶದ ವಿವಿದೆಡೆ ಸರಾಸರಿ ಒಂದು ಎಳನೀರು ಬೆಲೆ ಸುಮಾರು ₹60ಕ್ಕೆ ತಲುಪಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಇದು ₹45 ಇತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪೂರೈಕೆ ಪ್ರಮಾಣ ಕುಸಿತ ಮತ್ತು ಸರಬರಾಜು ಕಡಿಮೆಯ ಹಿನ್ನೆಲೆಯಲ್ಲಿ  ಬೆಲೆಯಲ್ಲಿ ಸಾಧ್ಯತೆ ಇದೆ. ಮುಂದೆ ಬಿಸಲಿನ ಪ್ರಮಾಣವೂ ಹೆಚ್ಚಳವಾಗುವುದರಿಂದ ಎಳನೀರಿಗೆ ಬೇಡಿಕೆ ಹೆಚ್ಚಾಗಲಿದೆ. ಈ ಸಂದರ್ಭ ಪೂರೈಕೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.


Tender coconut production in Tamil Nadu’s Pollachi–Anaimalai region has declined by around 40% in the past month, leading to a 50% drop in exports. Unusual weather conditions, including cold temperatures and irregular rainfall, are cited as the main causes. Reduced supply has already increased prices, and further price rise is expected in the coming months.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

15 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago