ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು ಹಾಗೂ ಮಾಡುವ ವಿಧಾನ : ಗೋಧಿ ಹುಡಿ 3 ಲೋಟ, ಮೈದಾ 1/4 ಕಪ್, ಕಪ್ಪು ಎಳ್ಳು 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ ಹಿಟ್ಟನ್ನು ಮೃದುವಾಗಿ ಕಲೆಸಿ. ಮಸಾಲೆ ಮಾಡಲು : ಬಟಾಣಿ ನೆನೆ ಹಾಕಿ,ಎಳೆಯ ಹಲಸಿನ ಕಾಯಿ ಕಟ್ ಮಾಡಿ ಕ್ಲೀನ್ ಮಾಡಿ ಇಟ್ಟು ಕೊಳ್ಳಿ , ನಂತರ ಕುಕ್ಕರ್ ಗೆ ಹಾಕಿ ಇದಕ್ಕೆ ನೆನೆ ಹಾಕಿದ ಬಟಾಣಿ, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಬೇಯಿಸಿ. ನಂತರ ಬಿಸಿ ಸ್ವಲ್ಪ ಆರಿದ ನಂತರ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.
ಬಾಣಲೆಗೆ ಎಣ್ಣೆ, ಸಾಸಿವೆ, ಉದ್ದಿನ, ಬೇಳೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ 1/4 ಚಮಚ, ಗರಂ ಮಸಾಲ 1/2 ಚಮಚ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ 1/4 ಚಮಚ, ಸಮೋಸಾ ಮಸಾಲೆ 1 ಚಮಚ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.
ನಂತರ ಹಿಟ್ಟನ್ನು ನಾದಿ ಉಂಡೆಗಳನ್ನು ಮಾಡಿ, ಚಪಾತಿಯಂತೆ ಲಟ್ಟಿಸಿ ಕಟ್ ಮಾಡಿ ನಂತರ ಮಿಕ್ಸ್ ಮಾಡಿ ಇಟ್ಟ ಮಸಾಲೆ ಯನ್ನು ಹಾಕಿ ಸಮೋಸಾ ಆಕಾರದಲ್ಲಿ ಮಾಡಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಸಮೋಸಾ ರೆಡಿ …
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್‌ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…
ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್…
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…