Advertisement
Share

ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಗುಜ್ಜೆ 3/4 ಕಪ್ ಇದಕ್ಕೆ ನೀರು, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ , ಚಿಕ್ಕ ಆಲೂಗಡ್ಡೆ 1 ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಬೇಯಿಸಿ ಕೊಳ್ಳಿ ನಂತರ ಬೇಯಿಸಿ ಕೊಳ್ಳಿ. ಬಿಸಿ ಆರಿದ ನಂತರ ನುಣ್ಣಗೆ ಪುಡಿ ಮಾಡಿ.

ಹಿಟ್ಟು ಕಲೆಸಿ ಕೊಳ್ಳಲು: ಕಡಲೆ ಹಿಟ್ಟು 1/2 ಕಪ್, ಓಂ ಕಾಳು, (ಅಜ್ವಾನ್) ಉಪ್ಪು ರುಚಿಗೆ ತಕ್ಕಷ್ಟು, ಮೆಣಸಿನ ಪುಡಿ,1/2 ಚಮಚ, ಅರಿಸಿನ ಪುಡಿ ಸ್ವಲ್ಪ, ನೀರು ಸೇರಿಸಿ ಹಿಟ್ಟನ್ನು ಕಲೆಸಿ ಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ, ಎಣ್ಣೆ ಸಾಸಿವೆ, ಉದ್ದಿನ ಬೇಳೆ , ಜೀರಿಗೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ.
ಇದಕ್ಕೆ ನಂತರ ಚಿಕ್ಕದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಕಸೂರಿ ಮೇತಿ ಹಾಕಿ ಮಿಕ್ಸ್ ಮಾಡಿ. ನಂತರ ನುಣ್ಣಗೆ ರುಬ್ಬಿದ ಮಿಶ್ರಣವನ್ನು ಹಾಕಿ ಇದಕ್ಕೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಉಂಡೆಗಳನ್ನು ಮಾಡಿ, ಹಿಟ್ಟಿನಲ್ಲಿ ಅದ್ದಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಬೋಂಡಾ ರೆಡಿ. ಬಿಸಿ ಬಿಸಿಯಾದ ಬೋಂಡಾ ಚಾ ಕಾಫಿ ಜೊತೆ ಸೂಪರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

10 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago