ಸುನಾಮಿ ಭೀತಿಗೆ ನಲುಗಿದ್ದ ಫಿಲಿಪಿನ್ಸ್‌ನಲ್ಲಿ ಭಯೋತ್ಪಾದಕರ ದಾಳಿ | ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಘಟನೆ |

December 3, 2023
12:07 PM

ಪ್ರಭಲ ಭೂಕಂಪದಿಂದ(earthquake) ಸುನಾಮಿ(tsunami) ಭೀತಿ ಎದುರಿಸುತ್ತಿದ್ದ ಫಿಲಿಪಿನ್ಸ್‌( Philippines), ಭಾನುವಾರ ಬೆಳಿಗ್ಗೆ ಭಯೋತ್ಪಾದಕರ ದಾಳಿಗೆ(Terrorist attack) ನಲುಗಿದೆ. ದೇಶದ ದಕ್ಷಿಣ ಭಾಗದಲ್ಲಿರುವ ವಿಶ್ವವಿದ್ಯಾಲಯದ ಜಿಮ್ನಾಷಿಯಮ್‌ನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಕ್ಯಾಥೊಲಿಕ್ ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ(Mass Prayer) ವೇಳೆ ಸಂಭವಿಸಿದ ಬಾಂಬ್ ದಾಳಿಯಲ್ಲಿ(Bomb blast) ಕನಿಷ್ಠ 4 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಭಯೋತ್ಪಾದಕರ ಕೃತ್ಯ ಎಂದು ಅಲ್ಲಿನ ಪೊಲೀಸರು ಹೇಳಿದ್ದು, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಧ್ಯಕ್ಷ ಫರ್ಡಿನಂಡ್ ಮಾರ್ಕೊಸ್ ಜೂನಿಯರ್‌, ‘ವಿದೇಶಿ ಭಯೋತ್ಪಾದಕರ ಪ್ರಜ್ಞಾಶೂನ್ಯ ಹಾಗೂ ಅತ್ಯಂತ ಹ್ಯೇಯ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಮುಗ್ದರ ಮೇಲೆ ಹಿಂಸಾಚಾರ ನಡೆಸಿರುವ ತೀವ್ರವಾದಿಗಳು ನಮ್ಮ ಸಮಾಜದ ಶತ್ರುಗಳೇ ಆಗಿದ್ದಾರೆ’ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

2017ರಲ್ಲಿ ಐದು ತಿಂಗಳ ಕಾಲ ಭಯೋತ್ಪಾದಕರ ಹಿಡಿತದಲ್ಲಿ ಸಿಲುಕಿದ್ದ ಮಾರವಾಯ್‌ ನಗರದಲ್ಲೇ ಭಾನುವಾರ ಬಾಂಬ್ ದಾಳಿ ನಡೆದಿದೆ. ಇದೇ ಪ್ರದೇಶದಲ್ಲಿ ದವ್ಲಾಹ್  ಭಯೋತ್ಪಾದಕ ಗುಂಪಿಗೆ ಸೇರಿದ 11 ಜನರನ್ನು ಫಿಲಿಪಿನ್ಸ್ ಸೇನೆ ಶನಿವಾರ ಹತ್ಯೆಗೈದಿತ್ತು. ಜತೆಗೆ 10 ಅತ್ಯಾಧುನಿಕ ಬಂದೂಕು ಹಾಗೂ ಮೂರು ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದರು. ಅದೇ ಸ್ಥಳದಲ್ಲಿ ಭಾನುವಾರ ಬಾಂಬ್‌ ಸ್ಫೋಟಿಸಲಾಗಿದೆ. ದೇಶದ ನಾಗರಿಕರ ಸುರಕ್ಷತೆ ಹಾಗೂ ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹಾಗೂ ಸೇನೆಗೆ ನಿರ್ದೇಶಿಸಲಾಗಿದೆ. ಇಂಥ ಕೃತ್ಯ ಎಸಗಿದವರನ್ನು ನ್ಯಾಯದ ಎದುರು ತರುತ್ತೇವೆ ಎಂದು ಮಾರ್ಕೊಸ್ ಜೂನಿಯರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

The Philippines, which was facing the threat of a tsunami due to a strong earthquake, was hit by a terrorist attack on Sunday morning. At least four people were killed and several others injured in a bomb attack that occurred during a mass prayer of Catholic Christians at a university gymnasium in the southern part of the country on Sunday.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror