ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್‌ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.
ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel