ಮಣಿಪುರ | 4 ಕಡೆಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | 53 ಲಾರಿಗಳಿಂದ 10,855 ಚೀಲ ಕಳ್ಳಸಾಗಾಣಿಕೆಯ ಅಡಿಕೆ ವಶ |

November 16, 2024
12:02 AM

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು ವಶಕ್ಕೆ ಪಡೆದಿದೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 74.52 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದೆ.ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಾದ್ಯಂತ ನಾಲ್ಕು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಈ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

ಇದು ಈ ವರ್ಷದ ಅತಿ ದೊಡ್ಡ ಅಕ್ರಮ ಸಾಗಾಟದ ತಡೆಯಾಗಿದ್ದು, ತನಿಖೆ ನಡೆಯುತ್ತಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ನರುಮ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 23 ಕೋಟಿ ಮೌಲ್ಯದ 3,400 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ರೈಫಲ್ಸ್ ವಿಭಾಗವು ಹೇಳಿಕೆ ನೀಡಿದೆ. ಆ ಬಳಿಕ ಸೀತಾ ಗ್ರಾಮದಲ್ಲಿ ಅಂದಾಜು 20,400 ಕೆಜಿ ತೂಕದ 1.76 ಕೋಟಿ ಮೌಲ್ಯದ 255 ಚೀಲಗಳನ್ನು ಜಪ್ತಿ ಮಾಡಲಾಗಿದೆ. ಆರ್‌ಆರ್‌ಸಿ ಗ್ರಾಮದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ 400 ಚೀಲಗಳು, ಒಟ್ಟು 32,000 ಕೆಜಿ ಮತ್ತು ಲಾಮ್‌ಲಾಂಗ್‌ ಖುನೂ ಎಂಬಲ್ಲಿ  5,44,000 ಕೆಜಿ ತೂಕದ 6,800 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಂದಾಜು ಮೌಲ್ಯ 47 ಕೋಟಿ ರೂಪಾಯಿಗಳಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. (Source:UNI )

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror