MIRROR FOCUS

ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು | ಮೆಣಸಿನಕಾಯಿ ಬೆಳೆ ರಕ್ಷಿಸಲು ಸಿಸಿಟಿವಿ ಅಳವಡಿಸಿದ ರೈತ |

Share

ಕಳೆದ 5-6 ತಿಂಗಳ ಹಿಂದೆ ಟೊಮೆಟೋ(Tomato) ರೈತರ(Farmer) ಕಥೆಯೂ ಇದೇ ಆಗಿತ್ತು. ತರಕಾರಿ(Vegetable) ಬೆಲೆ ಏರಿದರೆ(Price hike) ರೈತರಿಗೆ ಕಳ್ಳರ(Thief) ಕಾಟ ತಪ್ಪಿದ್ದಲ್ಲ. ಟೊಮೆಟೋ, ಅಡಿಕೆ ಈಗ ಮೆಣಸಿನ ಕಾಯಿ (Chilly) ಬೆಳೆಗೆ ಕಳ್ಳರ ಕಾಟ ಆರಂಭವಾಗಿದೆ. ಬರಗಾಲ(Drought) ಬಂದಾಗಲೆಲ್ಲಾ ಕಳ್ಳತನ ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಆದರೆ ಈ ಬಾರಿಯ ಬರಗಾಲ ಹೊಸ ರೀತಿಯ ಕಳ್ಳತನಕ್ಕೆ ನಾಂದಿ ಹಾಡಿದೆ. ರಾಯಚೂರು(Raichur) ಜಿಲ್ಲೆಯಲ್ಲಿ ರೈತರಿಗೆ ತಮ್ಮ ಬೆಳೆಗಳನ್ನ ಕಳ್ಳರಿಂದ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಇಲ್ಲೊಬ್ಬ ರೈತ ಜಮೀನಿಗೆ ಸಿಸಿ ಕ್ಯಾಮೆರಾ (CCTV) ಅಳವಡಿಸಿದ್ದಾನೆ.

Advertisement

ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತನ ಪರಿಸ್ಥಿತಿಯಂತೂ ಹೇಳತೀರದ್ದಾಗಿದೆ. ಹೀಗಿರುವಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೆಣಸಿನಕಾಯಿ ಬೆಳೆದಿರುವ ರಾಯಚೂರು  ಜಿಲ್ಲೆಯ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಈ ಮೊದಲು ಹತ್ತಿ, ತೊಗರಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಮೆಣಸಿನಕಾಯಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾತ್ರೋರಾತ್ರಿ ಗಿಡಸಮೇತ ಮೇಣಕಾಸಿನಯನ್ನು ಕದ್ದು ಎಸ್ಕೇಪ್ ಆಗುತ್ತಿದ್ದಾರೆ. ಇದರಿಂದ ಬೇಸತ್ತ ರೈತ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾನೆ. ಆದರೂ ಕಳ್ಳರ ಭಯ ಇರುವುದರಿಂದ ರಾತ್ರಿ ಹೊತ್ತು ಜಮೀನಿನಲ್ಲೇ ಮಲಗುತ್ತಾರೆ.

ಮಳೆ ಕೊರತೆಯಿಂದ ಜಮೀನಿಗೆ ನೀರು ಬೀಡಲು ಸಾಕಷ್ಟು ಹಣ ಖರ್ಚು ಮಾಡಿರುವ ರೈತರು, ಕೀಟನಾಶಕ, ಗೊಬ್ಬರ ಅಂತ ಎಕರೆಗೆ ಲಕ್ಷಾಂತರ ರೂಪಾಯಿ ಸುರಿದಿದ್ದಾರೆ. ಎಕರೆಗೆ 10 ರಿಂದ 12 ಕ್ವಿಂಟಾಲ್ ಬೆಳೆ ನಿರೀಕ್ಷೆಯಿದ್ದು, ಆ ಪೈಕಿ 2-3 ಕ್ವಿಂಟಾಲ್ ಕಳ್ಳರ ಪಾಲಾದ್ರೆ ನಮಗೆ ಉಳಿಯುವುದೇನು ಅಂತ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಬೆಳೆ ರಕ್ಷಣೆಗೆ ಸಹಾಯ ಮಾಡಬೇಕು ಅಂತ ರೈತರು ಒತ್ತಾಯಿಸಿದ್ದಾರೆ.

ಬರಗಾಲ ರೈತರನ್ನ ಮಾತ್ರ ಸಂಕಷ್ಟಕ್ಕೆ ಸಿಲುಕಿಸಿಲ್ಲ. ಜೊತೆಗೆ ಹೊಸ ರೀತಿಯ ಕಳ್ಳತನಕ್ಕೂ ದಾರಿ ಮಾಡಿಕೊಟ್ಟಿದೆ. ಬೆಳೆಯನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗುವವರೆಗೂ ರೈತರಿಗೆ ನಿದ್ದೆಯಿಲ್ಲದಂತಾಗಿದೆ. ರೈತರ ಕಷ್ಟಕ್ಕೆ ಕೂಡಲೇ ಪರಿಹಾರ ಸಿಗಬೇಕಿದೆ.

Cases of theft usually increase whenever there is a drought. But this drought has ushered in a new kind of theft. The biggest challenge for farmers in Raichur district is to protect their crops from thieves. Therefore, a farmer here has installed a CC camera (CCTV) for his farm.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

9 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

10 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

10 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

17 hours ago