ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ‘ನಾನು ಆತಿರಾ’ ಪುಸ್ತಕವನ್ನು ಲೋಕಾರ್ಪಣೆ

October 13, 2025
7:40 PM

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತದನಂತರ ಆರ್ಷ ವಿದ್ಯಾ ಸಮಾಜದ ಬೋಧನೆಯ ಮುಖಾಂತರ ಮರಳಿ ಮಾತೃಧರ್ಮಕ್ಕೆ ಆಗಮಿಸಿದ ಆತಿರಾ ಅವರು ಬರೆದ ಕೃತಿಯ ಕನ್ನಡ ಅವತರಣಿಕೆ ‘ನಾನು ಆತಿರಾ’ ಪುಸ್ತಕವನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಬಿಡುಗಡೆಗೊಳಿಸಲಾಯಿತು.  ತಿರುವನಂತಪುರಂನ ಆರ್ಷ ವಿದ್ಯಾ ಸಮಾಜದ ಸಂಸ್ಥಾಪಕ ಆಚಾರ್ಯ ಕೆ.ಆರ್.ಮನೋಜ್ ಜಿ  ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಇದಕ್ಕೂ ಮೊದಲು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಗೆ ಇಪ್ಪತ್ತೈದು ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ವಿದ್ಯಾಲಯದ ಕಟ್ಟಡದ ನೂತನ ಅಂತಸ್ತು, ವ್ಯಾಯಾಮಶಾಲೆ ಹಾಗೂ ‘ಸುಶೀಲಾ – ಶಿವಾನಂದ ರಾವ್’ ವೇದಿಕೆ ಸಭಾಂಗಣವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಯಾವ ವಿದ್ಯಾಭ್ಯಾಸ ವಿದ್ಯಾರ್ಥಿಗಳನ್ನು ರೂಪುಗೊಳಿಸಬೇಕೋ ಅದೇ ವಿದ್ಯಾಭ್ಯಾಸ ಇಂದು ವಿದ್ಯಾರ್ಥಿಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದೆ. ಆದರೆ ಮರಳಿ ವಿದ್ಯಾಭ್ಯಾಸದ ಮೂಲಕವೇ ನಾವು ನಮ್ಮವರನ್ನು ಉಳಿಸಿಕೊಳ್ಳಬೇಕಾಗಿದೆ. ಇಂದು ಗೆಳೆಯರ ಸೋಗಿನಲ್ಲಿ, ಶಿಕ್ಷಕರ ರೂಪಿನಲ್ಲಿ, ಪಠ್ಯಕ್ರಮದ ವೇಷಗಳಲ್ಲಿ ಹರಯದ ಮಕ್ಕಳ ತಲೆಹಾಳು ಮಾಡುವ ಕುತಂತ್ರಗಳು ಅವ್ಯಾಹತವಾಗಿ ನಡೆಯುತ್ತಿವೆ. ಇದಕ್ಕೆ ಎದೆತಟ್ಟಿ ನಿಲ್ಲಬೇಕಾದರೆ ನಮ್ಮತನದ ಉತ್ಕೃಷ್ಟತೆಯ ಅರಿವು ನಮಗಿರಬೇಕು ಎಂದು ಹೇಳಿದರು. ಯುವಕ ಯುವತಿಯರನ್ನು ಮತಾಂತರಗೊಳಿಸುವ ಬಹುದೊಡ್ಡ ಜಾಲವೇ ಇದೆ. ಆರಂಭದಲ್ಲಿ ಗೆಳೆತನ ಬೆಳೆಸುತ್ತಾ, ಸನಾತನ ಧರ್ಮದ ಬಗೆಗೆ ಜಿಜ್ಞಾಸುಗಳಂತೆ ಪ್ರಶ್ನೆ ಮಾಡುವುದಕ್ಕೆ ಆರಂಭಿಸುತ್ತಾರೆ. ಆ ಪ್ರಶ್ನೆಗಳಿಗೆ ಸರಿಯಾದ ಉತ್ತರ ನಮ್ಮ ಬಳಿ ಇರದಿದ್ದರೆ ನಂತರ ನಮ್ಮನ್ನು ಗೊಂದಲಕ್ಕೀಡುಮಾಡತೊಡಗುತ್ತಾರೆ. ಹಿಂದೂ ಆಚಾರ ವಿಚಾರಗಳನ್ನು, ದೇವ ದೇವತೆಗಳನ್ನು ಅಪಹಾಸ್ಯ ಮಾಡತೊಡಗುತ್ತಾರೆ. ಕ್ರಮೇಣ ಇದು ಬೆಳೆಯುತ್ತಾ ಮತಾಂತರದ ಖೆಡ್ಡಾಕ್ಕೆ ಕೆಡವುತ್ತಾರೆ. ಆದರೆ ಯಾವಾಗ ನಾವು ಸನಾತನ ಧರ್ಮದ ಬಗೆಗೆ ಶಾಸ್ತ್ರಬದ್ಧವಾಗಿ ಅಧ್ಯಯನ ನಡೆಸುತ್ತೇವೋ, ಆಗ ನಮ್ಮನ್ನು ಮೋಸಗೊಳಿಸುವುದಕ್ಕೆ ಸಾಧ್ಯವಾಗಲಾರದು ಎಂದು ಅಭಿಪ್ರಾಯಪಟ್ಟರು.

‘ನಾನು ಆತಿರಾ’ ಪುಸ್ತಕದ ಕೃತಿಕಾರರಾದ ಆತಿರಾ ಎಸ್., ಕನ್ನಡಕ್ಕೆ ಅನುವಾದಿಸಿದ ನಾಗೇಂದ್ರ ಹಾಗೂ ಶ್ವೇತಾ ಜಲಗೇರಿ ಅನಿಸಿಕೆ ಹಂಚಿಕೊಂಡರು.

ಸಭಾಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಭಾರತವನ್ನು ಉಳಿಸುವ ಬೆಳೆಸುವ ಕಾರ್ಯವನ್ನು ಮಾಡಬೇಕಾದದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಅಂತೆಯೇ ವಿದ್ಯಾರ್ಥಿಗಳಿಗೆ ನೀಡಬೇಕಾದ ನ್ಯಾಯಯುತ ವಿಚಾರಗಳನ್ನು ನೀಡುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಹಲವು ವ್ಯವಸ್ಥೆಗಳನ್ನು ಅಂಬಿಕಾದಲ್ಲಿ ರೂಪುಗೊಳಿಸಲಾಗಿದೆ ಎಂದು ನುಡಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಡಾ.ಎಚ್.ಮಾಧವ ಭಟ್, ಸತ್ಯಪ್ರಸಾದ್ ಕೋಟೆ, ಬಾಲಕೃಷ್ಣ ಬೋರ್ಕರ್, ಪ್ರಸನ್ನ ಭಟ್, ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಉಪಸ್ಥಿತರಿದ್ದರು.

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್ ಸ್ವಾಗತಿಸಿ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವಂದಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪಪ್ರಾಂಶುಪಾಲೆ ಶೈನಿ ಹಾಗೂ ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಸನ್ಮಾನ ಪತ್ರಗಳನ್ನು ವಾಚಿಸಿದರು. ಆರ್ಷ ವಿದ್ಯಾಸಮಾಜದ ಶೃತಿ ಭಟ್ ಅವರು ಆಚಾರ್ಯ ಮನೋಜ್ ಜಿ ಅವರ ಮಳೆಯಾಳಂ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದರು.

ವಿದ್ಯಾರ್ಥಿಗಳಾದ ಜ್ವಲನ್ ಜೋಷಿ, ಅವನೀಶ ಶರ್ಮ ಹಾಗೂ ವಿದ್ಯಾರ್ಥಿನಿ ತೇಜಶ್ರೀ ಎಂ.ಜೆ ಶಂಖನಾದಗೈದರು. ವಿದ್ಯಾರ್ಥಿಗಳಾದ ಪ್ರಮೋದ ಗಣಪತಿ ಭಟ್, ಅವನೀಶ ಶರ್ಮ, ಸ್ಕಂದ ಕೃಷ್ಣ, ಶ್ರೀಶ ಎಂ, ಭರತ ಕೃಷ್ಣ, ಸಾತ್ವಿಕ್, ಸಂದೀಪಕೃಷ್ಣ, ಜ್ವಲನ್ ಜೋಷಿ, ಶ್ರೀರಾಮ ಪಿ., ಶಿಶರ್ ವೇದಘೋಷ ಪ್ರಸ್ತುತಪಡಿಸಿದರು. ವಿದ್ಯಾರ್ಥಿನಿಯರಾದ ಧೃತಿ ಭಟ್, ನಿಧಿ, ಶಿಶಿರಾ, ಈಶಿತಾ ಹಾಗೂ ಹಂಸಿನಿ ಕುಮಾರಿ ಪ್ರಾರ್ಥಿಸಿದರು. ವಿದ್ಯಾರ್ಥಿನಿ ವೈಷ್ಣವಿ ಕಾರ್ಯಕ್ರಮ ನಿರ್ವಹಿಸಿದರು.

ವಿದ್ಯಾರ್ಥಿನಿಯಿಂದ ಗಣಹೋಮ : ಸಭಾ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ನೂತನ ಅಂತಸ್ತಿನಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಸೀಮಾ ಅಗ್ನಿಹೋತ್ರಿ ಅವರಿಂದ ಗಣಹೋಮ ನೆರವೇರಿತು. ಹೆಣ್ಣುಮಕ್ಕಳಿಗೂ ವೇದಾಧ್ಯಯನದ ಅರ್ಹತೆ ಸಾಧ್ಯತೆಗಳಿವೆ ಎಂಬುದನ್ನು ಸಾಧಿಸಿ ತೋರಿಸುವ ಹಿನ್ನೆಲೆಯಲ್ಲಿ ಹಾಗೂ ಹುಡುಗಿಯರಲ್ಲಿ ವೇದಾಧ್ಯಯನದ ಆಸಕ್ತಿ ಮೂಡಿಸುವ ಹಿನ್ನಲೆಯಲ್ಲಿ ಅಸೀಮಾ ಅವರಿಂದ ಗಣಹೋಮ ನಡೆಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror