Advertisement
ಸುದ್ದಿಗಳು

ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ | ಕೇಂದ್ರದ ಉದ್ಯೋಗಿಗಳಿಗಾಗಿ ಯೋಗ ಕುರ್ಚಿ

Share

ಒತ್ತಡವಿಲ್ಲದ ಕೆಲಸವಿಲ್ಲ. ಒಂದಲ್ಲ ಒಂದು ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾಗುತ್ತದೆ. ಹಾಗಾಂತ ಒತ್ತಡ ಕಡಿಮೆ ಮಾಡಲು ಕೆಲಸದ ಸಮಯದಲ್ಲಿ ಯಾವ ಪರ್ಯಾಯಕ್ಕೂ ಮೊರೆ ಹೋಗಲು ಆಗುವುದಿಲ್ಲ.  ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ವೈ-ಬ್ರೇಕ್ ಯೋಗ ಅಟ್ ಆಫೀಸ್ ಚೇರ್ ನ್ನು  ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ.

ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…

13 hours ago

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

20 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

1 day ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

2 days ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

2 days ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

3 days ago