ಹವಾಮಾನ ಇಲಾಖೆ | 22-12-2025 | ಚಳಿ ಮುಂದುವರಿಕೆ, ತೇವಾಂಶ ಹೆಚ್ಚಾದರೆ ಮಳೆಯ ಸಾಧ್ಯತೆ…

December 22, 2025
1:02 PM

23.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ, ಚಳಿ ಮುಂದುವರಿಯುವ ಮುನ್ಸೂಚನೆ ಇದೆ.

ಡಿಸೆಂಬರ್ 26 ರಂದು ಉತ್ತರ ಶ್ರೀಲಂಕಾ ಕೇಂದ್ರವಾಗಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ತಮಿಳುನಾಡು ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 26ರ ನಂತರ ಚಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 29ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಆದರೆ ಉತ್ತರ ಒಳನಾಡು ಭಾಗಗಳಲ್ಲಿ ಚಳಿ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯ ಬಗ್ಗೆ ಡಿಸೆಂಬರ್ 26ರ ನಂತರ ನೋಡಬೇಕಾಗಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror