23.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ, ಚಳಿ ಮುಂದುವರಿಯುವ ಮುನ್ಸೂಚನೆ ಇದೆ.
ಡಿಸೆಂಬರ್ 26 ರಂದು ಉತ್ತರ ಶ್ರೀಲಂಕಾ ಕೇಂದ್ರವಾಗಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ತಮಿಳುನಾಡು ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 26ರ ನಂತರ ಚಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 29ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಆದರೆ ಉತ್ತರ ಒಳನಾಡು ಭಾಗಗಳಲ್ಲಿ ಚಳಿ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯ ಬಗ್ಗೆ ಡಿಸೆಂಬರ್ 26ರ ನಂತರ ನೋಡಬೇಕಾಗಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…