ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ದಕ್ಷಿಣ ಪ್ರದೇಶದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆ ಕುರಿತಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಸಭೆ ನಡೆಸಿದರು.
ಸಭೆಯಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿದರು. ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಎಂ.ಎಸ್.ಎಂ.ಇ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಕರ್ನಾಟಕದ 35 ಲಕ್ಷ ಎಂಎಸ್‌ಎಂಇಗಳ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಪೀಣ್ಯಾ ಕೈಗಾರಿಕೆಗಳ ಒಕ್ಕೂಟ ಸುಮಾರು 7400 ಎಂಎಸ್‌ಎಂಇ ಸದಸ್ಯತ್ವವನ್ನು ಹೊಂದಿರುವ ಅತಿದೊಡ್ಡ ಸೂಕ್ಷ್ಮ, ಸಣ್ಣ, ಮಧ್ಯಮಗಳ ಸಂಘಗಳಲ್ಲಿ ಒಂದಾಗಿದೆ. ಇದಕ್ಕೂ ಮೊದಲು ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಖಾಸಗಿ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್ಪ್ರೆಸ್ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಸಾರಿಗೆ…
ಈ ಬಾರಿ ಅಡಿಕೆ ಮಾರುಕಟ್ಟೆ ಏರಿಕೆ ಕಾಣುವ ನಿರೀಕ್ಷೆ ಇದೆ. ಆದರೆ ಬೆಳೆಗಾರರ…
ನವೆಂಬರ್ 18ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.…
ರಬ್ಬರ್ ಬೆಲೆ ಕುಸಿತದಿಂದಾಗಿ ಭಾರತದಲ್ಲಿ ಬೆಳೆಗಾರರು ಬಳಲುತ್ತಿರುವಾಗ, ರಬ್ಬರ್ ಆಮದು ಏಪ್ರಿಲ್ ಮತ್ತು…
ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ…
ಕೇಂದ್ರ ಸರ್ಕಾರ ರೈತರ ಮತ್ತು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ…