ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಆಹಾರ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ ನೀಡಿದ ಅವರು, 26 ಕೋಟಿ ಜನ ಬಡತನದಿಂದ ಹೊರ ಬಂದಿರುವ ಕುರಿತು ವಿಶ್ವಬ್ಯಾಂಕ್ ವರದಿ ನೀಡಿದೆ. ಪ್ರಧಾನಮಂತ್ರಿ ಅನ್ನ ಯೋಜನೆಯಡಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ 11 ವರ್ಷಗಳಲ್ಲಿ ಬಡತನ ನಿವಾರಣೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದ್ದು, ಬಡತನ ನಿವಾರಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel