ಈ ಬಾರಿ ಮಳೆ ಕೈಕೊಟ್ಟಿತು, ಕಾವೇರಿ ಸೇರಿದಂತೆ ಜೀವನದಿಗಳೂ ಈಗಲೇ ಬತ್ತುವ ಸೂಚನೆ ನೀಡಿದೆ. ಇದೆಲ್ಲದರ ನಡುವೆ ತಮಿಳುನಾಡು ನೀರು ಕೇಳುತ್ತಿದೆ. ಈಗ ನಮ್ಮ ನೆಲದ ರೈತರು ಬೆಳೆ ಬೆಳೆದು ನೀರಿಲ್ಲದೆ ಪರದಾಟ ನಡೆಸುತ್ತಿದ್ದಾರೆ. ಬೆಳೆ ನೀರಿಲ್ಲದೆ ಒಣಗುತ್ತಿದೆ…!.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬೆಳೆದು ನಿಂತಿರುವ ಪೈರುಗಳು ಒಣಗಲು ಆರಂಭವಾಗಿದೆ. ಬೆಳೆದು ನಿಂತಿರುವ ಭತ್ತ, ಕಬ್ಬು ಬೆಳೆಗೆ ನವೆಂಬರ್ ಅಂತ್ಯದವರೆಗೆ ನೀರಿನ ಅವಶ್ಯಕತೆ ಇದೆ. ಈಗಲೇ ನೀರಿನ ಕೊರತೆ ಕಂಡುಬಂದು ಒಣಗಲಾರಂಭಿಸಿದೆ. ಭತ್ತಕ್ಕಿಂತಲೂ ಕಬ್ಬಿಗೆ ಹೆಚ್ಚು ನೀರಿನ ಅವಶ್ಯಕತೆ ಇದೆ. ನೀರಿಲ್ಲದಿರುವುದರಿಂದ ಬೆಳೆಗಳಿಗೆ ನೀರು ಸಿಗುವ ಸಾಧ್ಯತೆಗಳ ಕ್ಷೀಣಿಸಿವೆ ಈಗಿನ ಪರಿಸ್ಥಿತಿಯಲ್ಲಿ ಬೆಳೆ ನಷ್ಟವಾಗುವುದು ಖಚಿತವಾಗಿದೆ. ಇದುವರೆಗೂ ಪರ್ಯಾಯ ನೀರಿನ ಸೌಲಭ್ಯ ಪಡೆಯಲಾಗದೆ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಟ ನಡೆಸುತ್ತಿದ್ದಾರೆ.1 ಬೆಳೆಗಳ ಉಳಿವಿಗೆ 10 ರಿಂದ 13 ಟಿಎಂಸಿ ನೀರು ಬೇಕು 11,59,607 ಹೆಕ್ಟೇರ್ ಪ್ರದೇಶದಲ್ಲಿರುವ ಬೆಳೆಗೆ ಈಗ ನೀರಿನ ಆವಶ್ಯಕತೆ ಇದೆ . ಈ ನಡುವೆಯೇ ತಮಿಳುನಾಡಿನ ನೀರು ಬಿಡಬೇಕಾದ ಸ್ಥಿತಿ ಬಂದಿದೆ.
ಈಗಿರುವ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರು ಕೊಡುವುದಕ್ಕೆ ಸರ್ಕಾರದಿಂದ ಸಾಧ್ಯವೇ ಇಲ್ಲ. ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಿಕೊಳ್ಳಬೇಕಾದರೆ 21 ಟಿಎಂಸಿಯಷ್ಟು ನೀರಿನ ಅವಶ್ಯಕತೆ ಇದೆ ಸರ್ಕಾರವು ಕಾವೇರಿ ನೀರನ್ನು ಹರಿಯಬಿಟ್ಟು ಕುಳಿತಿದೆ. ರೈತರು ಸಂಕಷ್ಟದ ಉರಿಯಲ್ಲಿ ಬೇಯುತ್ತಿದ್ದಾರೆ ಎಂದು ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಗಡಿ ತಾಲೂಕಿನಲ್ಲಿ ಮಳೆ ಕೊರತೆಯಿಂದ ರಾಗಿ ಬೆಳೆ ಒಣಗುತ್ತಿದ್ದು, ಮಳೆಗಾಗಿ ರೈತರು ದೇವರ ಮೊರೆ ಹೋಗಿದ್ದಾರೆ. ಕೈಗೆ ಬಂದ ಬೆಳೆ ನಾಶವಾಗುವ ಸ್ಥಿತಿಯಲ್ಲಿದೆ. ಮಳೆರಾಯ ಕೃಪೆ ತೋರಿದರೆ ಮಾತ್ರ ಬೆಳೆ ಕೈಗೆಟುಕಲಿದೆ ಎಂದು ರೈತರು ಅಸಾಹಯಕತೆ ವ್ಯಕ್ತಪಡಿಸಿದ್ದಾರೆ.ಕೂಡಲೇ ಸರ್ಕಾರವು ರಾಗಿಗೆ ಬೆಂಬಲ ಬೆಲೆ ಘೋಷಣೆ ಮತ್ತು ಒಂದು ಎಕರೆಗೆ 2 ಲಕ್ಷ ಬೆಳೆ ವಿಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…