ಇಡೀ ವಿಶ್ವದ ಕಣ್ಣು ಇಂಡೋ-ಆಸೀಸ್‌ ರೋಚಕ ಫೈನಲ್‌ ಮೇಲೆ | ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಆಗಮಿಸಲಿದ್ದಾರಾ..? | ಫೈನಲ್‌ ಪಂದ್ಯ ವಿಶೇಷತೆ ಏನು ಗೊತ್ತಾ..?

November 17, 2023
2:13 PM

ಇಡೀ ಭಾರತ ಮಾತ್ರವಲ್ಲ, ಇಡೀ ವಿಶ್ವದ ಕಣ್ಣು ಅದಿತ್ಯವಾರ ನವೆಂಬರ್ 19ರಂದು ಅಹ್ಮದಾಬಾದ್(Ahmedabad) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿರುವ ಐಸಿಸಿ ವಿಶ್ವಕಪ್ 2023ರ(World Cup -2023) ಫೈನಲ್ ಪಂದ್ಯದ(Final match) ಮೇಲಿದೆ. ಪಂದ್ಯ ವೀಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಜರಾಗುವ ನಿರೀಕ್ಷೆಯಿದೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್‌ ಗವಾಸ್ಕರ್‌ ಸರಣಿಯ 4ನೇ ಟೆಸ್ಟ್‌ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಅಂದು ವಿಶ್ವಕಪ್‌ಗೆ (ICC World Cup) ಮತ್ತಷ್ಟು ರಂಗು ತರಲು ಹಲವು ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.

ಏನೇನು ವಿಶೇಷ..? : ನವೆಂಬರ್‌ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್‌ ಫೈನಲ್‌ (World Cup Final) ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್‌ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್‌ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್‌ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

– ಅಂತರ್ಜಾಲ ಮಾಹಿತಿ

Not only India, the eyes of the whole world are on the final match of the ICC World Cup 2023 (World Cup-2023) to be held at the Narendra Modi Stadium in Ahmedabad on Sunday, November 19. Prime Minister Narendra Modi is expected to attend the match. Sources said that the Prime Minister will attend the ICC World Cup 2023 final match as the guest of honour.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು
May 11, 2025
7:15 AM
by: ನಾ.ಕಾರಂತ ಪೆರಾಜೆ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group