ಮುಂದಿನ ಜನವರಿಯೊಳಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ | ಈ ಬಾಂಬ್ ಸಿಡಿಸಿದವರು ಯಾರು..?

September 17, 2023
4:29 PM
ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ರಾಜ್ಯದಲ್ಲಿ ಈ ಬಾರಿ ಬಹುಮತದ ಕಾಂಗ್ರೆಸ್‌ ಸರ್ಕಾರ ಬಂದಿದ್ರೂ, ಆಗಾಗ ಸರ್ಕಾರ ಬೀಳುತ್ತೆ, ಮತ್ತೆ ಕಿಚಿಡಿ ಸರ್ಕಾರ ಬರುತ್ತೆ ಅನ್ನೋ ಮಾತು ಕೇಳಿ ಬರುತ್ತಲೇ ಇದೆ. ಈ ಬಾರಿ ಬಿಜೆಪಿಯ ನಾಯಕರೊಬ್ಬರು ದೊಡ್ಡ ಬಾಂಬ್ ಸಿಡಿಸಿದ್ದಾರೆ. ಮುಂಬರುವ ಜನವರಿ ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್, ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ ಎಂದು  ನುಡಿದ ಯತ್ನಾಳ್, ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು? ಎಂದು ಪ್ರಶ್ನಿಸಿದರು.

ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಹಿರಿಯರು, ಅವರಿಗೆ ನೋವಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ಜನವರಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗೋದು ಖಚಿತ ಎಂದ ಯತ್ನಾಳ್, ಇಷ್ಟೆಲ್ಲ ಗೊತ್ತಿದ್ದು ಅವರು ಆಪರೇಶನ್ ಹಸ್ತ ಮಾಡುತ್ತಿದ್ದಾರೆ. ನಮ್ಮ ಸಂಪರ್ಕದಲ್ಲಿಯೂ 45 ಜನ ಶಾಸಕರಿದ್ದಾರೆ ಎಂದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ
April 13, 2025
11:03 PM
by: The Rural Mirror ಸುದ್ದಿಜಾಲ
ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ
April 13, 2025
7:42 AM
by: The Rural Mirror ಸುದ್ದಿಜಾಲ
2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ
April 13, 2025
6:38 AM
by: ದ ರೂರಲ್ ಮಿರರ್.ಕಾಂ
ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |
April 12, 2025
9:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group