ರಾಜ್ಯದಲ್ಲಿ ಈ ಬಾರಿ ಬಹುಮತದ ಕಾಂಗ್ರೆಸ್ ಸರ್ಕಾರ ಬಂದಿದ್ರೂ, ಆಗಾಗ ಸರ್ಕಾರ ಬೀಳುತ್ತೆ, ಮತ್ತೆ ಕಿಚಿಡಿ ಸರ್ಕಾರ ಬರುತ್ತೆ ಅನ್ನೋ ಮಾತು ಕೇಳಿ ಬರುತ್ತಲೇ ಇದೆ. ಈ ಬಾರಿ ಬಿಜೆಪಿಯ ನಾಯಕರೊಬ್ಬರು ದೊಡ್ಡ ಬಾಂಬ್ ಸಿಡಿಸಿದ್ದಾರೆ. ಮುಂಬರುವ ಜನವರಿ ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್, ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ ಎಂದು ನುಡಿದ ಯತ್ನಾಳ್, ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು? ಎಂದು ಪ್ರಶ್ನಿಸಿದರು.
ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಹಿರಿಯರು, ಅವರಿಗೆ ನೋವಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ಜನವರಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗೋದು ಖಚಿತ ಎಂದ ಯತ್ನಾಳ್, ಇಷ್ಟೆಲ್ಲ ಗೊತ್ತಿದ್ದು ಅವರು ಆಪರೇಶನ್ ಹಸ್ತ ಮಾಡುತ್ತಿದ್ದಾರೆ. ನಮ್ಮ ಸಂಪರ್ಕದಲ್ಲಿಯೂ 45 ಜನ ಶಾಸಕರಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…