ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು ರೈತರಿಗೆ ಉಪಯುಕ್ತವಾಗುವ ಹಾಗೂ ರೈತರನ್ನು ರಕ್ಷಣೆ ಮಾಡುವ ಬಜೆಟ್ ಮಂಡನೆಯಾಗಬೇಕೆಂದು ರೈತ ಮುಖಂಡ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಮಾತನಾಡಿದ ಅವರು, ಈ ಬಾರಿಯ ಕೇಂದ್ರ ಬಜೆಟ್ ಬಗ್ಗೆ ಕಾತುರದಿಂದ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಹಾಗೂ ಕೃಷಿಯಿಂದ ರೈತರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ರೈತರಿಗೆ ಉಪಯುಕ್ತವಾಗುವ ಹಾಗೂ ರೈತರ ರಕ್ಷಣೆ ಮಾಡುವ ಬಜೆಟ್ ನಿರೀಕ್ಷೆಯ್ಲಲಿದ್ದೇವೆ ಎಂದು ತಿಳಿಸಿದ್ದಾರೆ. ಬಹಳ ಮುಖ್ಯವಾಗಿ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಆಗಬೇಕು. ರೈತರ ಎಲ್ಲಾ ಬೆಳೆಗಳ ಮೇಲೆ ಹಾಕಿರುವ ಜಿಎಸ್ ಟಿ ಕರ ವನ್ನು ರದ್ದು ಮಾಡಬೇಕು. ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel