#Chandrayaan3| ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆ | ಚಂದ್ರಯಾನ-3 ಸೆರೆಹಿಡಿದ ಚಂದ್ರನ ಮೊದಲ ಚಿತ್ರ ಬಿಡುಗಡೆ |

August 7, 2023
1:34 PM
ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ.

ಭಾರತದ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ವಿಜ್ಞಾನಿಗಳ ಆಕಾಂಕ್ಷೆಯಂತೆ ತನ್ನ ಗುರಿಯನ್ನು ತಲುಪುತ್ತಿದೆ. ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 #Chandrayaan-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

Advertisement
Advertisement

 

Advertisement

ಮೂನ್ ಮಿಷನ್  ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್#ISTRAC ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ಶನಿವಾರ ಹೇಳಿತ್ತು.

ಮುಂದಿನ ಕಾರ್ಯಾಚರಣೆ ಹೇಗೆ ನಡೆಯಲಿದೆ? :  ಚಂದ್ರಯಾನ-3 ಗಗನನೌಕೆಯು ಆಗಸ್ಟ್ 5 ರಂದು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಈ ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸಲು ದ್ರವ ಎಂಜಿನ್ ಅನ್ನು ಮತ್ತೆ ಉರಿಸಲಾಗುತ್ತದೆ. ಚಂದ್ರಯಾನವು ಚಂದ್ರನನ್ನು ನಾಲ್ಕು ಬಾರಿ ಸುತ್ತುತ್ತದೆ. ಪ್ರತಿ ಸುತ್ತಿನಲ್ಲೂ ಚಂದ್ರನ ಮೇಲ್ಮೈಗೆ ಹತ್ತಿರವಾಗುತ್ತದೆ. ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ. ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5:47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.

Source : Twitter 

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |
May 19, 2025
10:15 AM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group