ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆಯೊಂದು ಪಡುಬಿದ್ರಿಯ ಉಚ್ಚಿಲದಲ್ಲಿ ಸೋಮವಾರ ನಡೆದಿದೆ.
ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ.
ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…