Advertisement
MIRROR FOCUS

ಮರುಕಳಿಸಲಿದೆ ಮತ್ತೆ ಉದ್ಯಾನ ನಗರಿ ವೈಭವ | ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗ್ತಿದೆ ಮಿನಿ ಪಶ್ಚಿಮ ಘಟ್ಟ…!

Share

ಪಶ್ಚಿಮ ಘಟ್ಟ ಉಳಿಸಬೇಕು ಅನ್ನುವ ಕೂಗು ದಶಕಗಳ ಕಾಲದಿಂದ ಕೇಳಿ ಬರುತ್ತಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ ನಮ್ಮ ಹೆಮ್ಮೆಯ ಪ್ರಕೃತಿ ಕೊಡುಗೆಯನ್ನು ವಿನಾಶದತ್ತ ಕೊಂಡೊಯ್ಯುತ್ತಿದ್ದಾನೆ. ಪ್ರಕೃತಿದತ್ತವಾಗಿ ದೊರೆತ ಪಶ್ಚಿಮ ಘಟ್ಟವನ್ನು ಉಳಿಸಿಕೊಳ್ಳಲಾಗದ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ನಾಗರೀಕರು ಈಗ ಕೃತಕ ಪಶ್ಚಿಮ ಘಟ್ಟವನ್ನು ನಿರ್ಮಿಸಲು ಹೊರಟಿದ್ದಾರೆ. ಇದು ಸಂತಸದ ವಿಷಯವೇ.. ಆದರೆ ಮಾನವ ಹಾಗೂ ಪ್ರಾಣಿ ಕುಲಕ್ಕೆ, ಮುಂದಿನ ಪೀಳಿಗೆಗೆ ಜೀವ ಬಲವಾಗಿರುವ ಪಶ್ಚಿಮವನ್ನು ಉಳಿಸುವ ಕೆಲಸವನ್ನು ಮೊದಲು ಮಾಡಬೇಕಾಗಿದೆ. ಇದೀಗ ಈ ಎಲ್ಲಾ ಯೋಚನೆಗಳೂ ನಗರದಲ್ಲೂ ಜಾಗೃತಿಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾಗ್ತಿದೆ. ನಿಜಕ್ಕೂ ಶ್ಲಾಘಿಸಬೇಕಾದಂತ ಕೆಲಸವೇ. ಕಲುಷಿತಗೊಂಡಿರುವ ಬೆಂಗಳೂರಿನ ವಾತಾವರಣವನ್ನು ಸರಿ ದಾರಿಗೆ ತರಬೇಕಾದರೆ ಇಂಥದ್ದೊಂದು ಕಾರ್ಯ ಆಗಲೇ ಬೇಕಿದೆ. ಬೆಂಗಳೂರಿನಲ್ಲೇ ಪಶ್ಚಿಮ ಘಟ್ಟದ ಸೌಂದರ್ಯ ಸಿಗುವುದಾದರೆ ಅದು ನಿಜಕ್ಕೂ ಖುಷಿಯ ವಿಚಾರ. ಪಶ್ಚಿಮ ಘಟ್ಟದ ಸಸ್ಯಗಳು, ಜಲಪಾತ್, ನಿತ್ಯ ಹರಿದ್ವರ್ಣ ಕಾಡುಗಳನ್ನು ನೋಡಲು ಅದೆಷ್ಟೋ ಜನ ಅಲ್ಲಿಗೆ ಟ್ರಿಪ್ ಹೋಗ್ತಾರೆ. ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ತಾರೆ. ಬೆಂಗಳೂರಿನಲ್ಲೇ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾದ್ರೆ ಹೇಗೆ? ಹೌದು ಲಾಲ್‍ಬಾಗ್‍ನಲ್ಲಿ ಮಿನಿ ಪಶ್ಚಿಮ ಘಟ್ಟಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 6 ಎಕರೆ ಬಂಜರು ಭೂಮಿಯಲ್ಲಿ ಸಹ್ಯಾದ್ರಿ ಪ್ರದೇಶದಲ್ಲಿ ಬೆಳೆಯುವ ವಿವಿಧ ಜಾತಿಯ ಮರಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಎರಡು ವರ್ಷಗಳ ಹಿಂದೆ ಸಹ್ಯಾದ್ರಿ ಪ್ರದೇಶದಿಂದ 190 ಕ್ಕೂ ಹೆಚ್ಚು ಜಾತಿಯ ಸಸಿಗಳನ್ನು ತರಿಸಿ ನೆಡಲಾಗಿದೆ, ಅದರಲ್ಲಿ ಕೆಲವು ಹಣ್ಣಿನ ಗಿಡಗಳು ಸೇರಿದಂತೆ 132 ಗಿಡಗಳು ಉಳಿದುಕೊಂಡಿವೆ ಎಂದು ಜೀವವೈವಿಧ್ಯ ತಜ್ಞ ಕೇಶವ ಮೂರ್ತಿ ಹೇಳಿದ್ದಾರೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಪಶ್ಚಿಮ ಘಟ್ಟಗಳ 400 ಕ್ಕೂ ಹೆಚ್ಚು ಜಾತಿಯ ಗಿಡಗಳನ್ನು ಲಾಲ್‍ಬಾಗ್‍ನಲ್ಲಿ ನೆಡಲಾಗಿದೆ. ತೋಟಗಾರಿಕೆ ಇಲಾಖೆ ಸಿಬ್ಬಂದಿ ಮಣ್ಣಿನ ಫಲವತ್ತತೆ ಕುರಿತು ಕೆಲಸ ಮಾಡುತ್ತಿದ್ದು, ಮಂಗಳವಾರ ಸಹ್ಯಾದ್ರಿ ಬೆಟ್ಟದಿಂದ ತರಿಸಿದ್ದ 400 ಸಸಿಗಳನ್ನು ವಿದ್ಯಾರ್ಥಿ ಸ್ವಯಂಸೇವಕರ ನೆರವಿನಿಂದ ನೆಡಲಾಗಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಘಟ್ಟದ ಪೊದೆಗಳು, ಗಿಡಮೂಲಿಕೆಗಳ ಸಸ್ಯಗಳನ್ನು ಸೇರಿಸಲಾಗುವುದು ಎಂದು ತೋಟಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ.

Source : Indian Express

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

11 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago