ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಂದಿನಂತೆ ಈ ಬಾರಿ ಮಳೆಯಾಗಿಲ್ಲ. ಹಾಗಾಗಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದ ಮಂಡ್ಯ ಹಾಗೂ ಹಳೇ ಮೈಸೂರು ಭಾಗ, ಬೆಂಗಳೂರು ಜನತೆ ಪರದಾಡುವಂತಾಗಿದೆ. ಆದರೆ ತಮಿಳುನಾಡು ಮಾತ್ರ ಇದಾವುದನ್ನು ತಲೆಕೆಡಿಸಿಕೊಳ್ಳದೆ, ತನ್ನ ಪಾಲಿನ ನೀರನ್ನು ಕೊಡುವಂತೆ ಪೀಡಿಸುತ್ತಿದೆ. ತೆಗೆದುಕೊಂಡಿದೆ ಕೂಡ. ಆದರೆ ಕೆಆರ್‌ಎಸ್‍ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರುಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.
ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್‍ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್‌ಎಸ್‍ನಲ್ಲಿ 21 ಟಿಎಂಸಿ ನೀರಿದೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…