Advertisement
MIRROR FOCUS

#INDIA | ರಿಪಬ್ಲಿಕ್‌ ಆಫ್‌ ಭಾರತ್‌…! | ಭಾರತದ ಹೆಸರು ಬದಲಾಗುತ್ತಾ…? | ಚರ್ಚೆ ಹುಟ್ಟು ಹಾಕಿದ ಸಂದೇಶ

Share

ಕೇಂದ್ರ ಸರ್ಕಾರವು ದೇಶದ ಹೆಸರನ್ನು `ಇಂಡಿಯಾ’ ಬದಲಿಗೆ `ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಮರುನಾಮಕರಣ ಮಾಡುತ್ತದೆಯೇ..? ಹೀಗೊಂದು ಚರ್ಚೆ ಈಗ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

Advertisement
Advertisement

ಈ ನಡುವೆಯೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಟ್ವಿಟರ್ (ಎಕ್ಸ್) ಪೋಸ್ಟ್ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ. ಹೀಗಾಗಿ ಹೆಸರು ಬದಲಾವಣೆ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಚರ್ಚೆಯಲ್ಲಿ ಕೇಳಿಬಂದಿದೆ. ಸಂಸತ್‌ನಲ್ಲಿ ನಿರ್ಣಯ ಮಂಡನೆಗೆ ಸರ್ಕಾರ ಸಜ್ಜಾಗಿದೆ. ಈ ಮೂಲಕ ವಿಪಕ್ಷಗಳ ಒಕ್ಕೂಟಕ್ಕೆ ಠಕ್ಕರ್‌ ಕೊಡಲು ಕೇಂದ್ರ ಐಡಿಯಾ ಮಾಡಿದೆ ಎಂದು ಹೇಳಲಾಗುತ್ತಿದೆ.

Advertisement

ಇಂಡಿಯಾ ಬದಲು ದೇಶದ ಹೆಸರನ್ನು `ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಈ ಚರ್ಚೆ ಆರಂಭವಾಗಿತ್ತು. ಇದೀಗ   ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನದ ಘೋಷಣೆಯು ಮಾಧ್ಯಮಗಳು ಮತ್ತು ರಾಜಕೀಯ ವಲಯಗಳಲ್ಲಿ ಸಾಕಷ್ಟು ಸಂಚಲನವನ್ನು ಸೃಷ್ಟಿಸಿದೆ. ಹಲವರ ಪ್ರಕಾರ ಮಹಿಳಾ ಮೀಸಲಾತಿ ಮಸೂದೆ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ, ಏಕರೂಪ ನಾಗರಿಕ ಸಂಹಿತೆ , ಅಥವಾ ಪೂಜಾ ಸ್ಥಳಗಳ ಕಾಯಿದೆ, ವಕ್ಫ್‌ನಂತಹ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗಳ ಗುಂಪನ್ನು ಸರ್ಕಾರವು ತರಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿವೆ.

Advertisement

ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು  ‘ರಿಪಬ್ಲಿಕ್ ಆಫ್ ಭಾರತ್’ ಎಂದು ಟ್ವಿಟರ್‌ನಲ್ಲಿ , ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಬರೆದುಕೊಂಡಿದ್ದಾರೆ.

ದೇಶದ ಹೆಸರನ್ನೇ ಬದಲಾಯಿಸಲು ಸರ್ಕಾರ ಮುಂದಾಗಿದೆ ಎಂದು ಐಎನ್‌ಡಿಐಎ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

Advertisement

Source: News Agencies

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

15 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

16 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

16 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

16 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

19 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

19 hours ago