ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

May 13, 2024
8:32 PM
ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

ಮಳೆ(Rain) ಬಂದರೆ ಬೆಳೆ(Crop). ರೈತನ(Farmer) ಬದುಕು ಹಸನಾದರೆ ಮಾತ್ರವೇ ಸಮೃದ್ಧ. ಆದರೆ ಈ ಬಾರಿಯ ಭೀಕರ ಬರಗಾಲ(Drought) ರೈತರನ್ನು ಕೆಂಗೆಡಿಸಿದೆ. ಈ ಕಾರಣದಿಂದ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ರೈತರಿಗೂ ಫಸಲು ಕಡಿಮೆಯಾಗಿದೆ. ರೈತ ಬೆಳೆದ ಬೆಳೆಯೆಲ್ಲಾ ನೀರಿಲ್ಲದೆ, ಬಿಸಿಲಿನ ತಾಪಕ್ಕೆ(heat temperature) ಒಣಗಿ ಹೋಗಿದೆ. ಭೀಕರ ಬರಗಾಲದಿಂದ ಹಣ್ಣುಗಳ ರಾಜ ಎನಿಸಿಕೊಂಡಿರುವ ಮಾವು (Mangoes) ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ರಾಮನಗರ(Ramanagara) ಜಿಲ್ಲೆಯಲ್ಲಿ ಬರೋಬ್ಬರಿ 400ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಇತ್ತ ಹಾಕಿದ ಬಂಡವಾಳವೂ ಇಲ್ಲದೇ, ಹತ್ತಾರು ವರ್ಷಗಳಿಂದ ಬೆಳೆದಿದ್ದ ಮರಗಳೂ ಉಳಿಯದೇ ರೈತರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ.

Advertisement
ರೇಷ್ಮೆನಗರಿ ಎಂದು ಬಿರುದು ಪಡೆದ ರಾಮನಗರ ಹಣ್ಣಿನ ರಾಜ ಮಾವು ಬೆಳೆಯುವಲ್ಲೂ ಹೆಸರು ಮಾಡಿದೆ. ರಾಜ್ಯದಲ್ಲಿ ಮಾವಿನ ಸೀಸನ್ ಶುರುವಾಗೋದು ಇಲ್ಲಿಂದಲೇ. ಅತ್ಯಂತ ಉತ್ಕೃಷ್ಟ ಹಾಗೂ ವಿವಿಧ ತಳಿಯ ಮಾವನ್ನು ವಿದೇಶಕ್ಕೆ ರಫ್ತು ಮಾಡುವ ಇತಿಹಾಸ ಈ ಜಿಲ್ಲೆಗಿದೆ. ಈ ಬಾರಿ ಮಾವು ಬೆಳೆಯ ಇತಿಹಾಸದಲ್ಲೇ ಕಂಡು ಕೇಳರಿಯದ ಬರದಿಂದ ಮಾವು ಬೆಳೆ ನೆಲಕಚ್ಚಿದೆ. ಸೀಸನ್‍ನಲ್ಲಿ ಸುಮಾರು 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಉತ್ಪಾದನೆ ಆಗುತ್ತಿದ್ದ ಮಾವು ಈ ಬಾರಿ ಕೆಲವೇ ಕೆಲವು ಟನ್‍ಗಳಿಗೆ ಮಾತ್ರ ಸೀಮಿತವಾಗಿದೆ. ಮಾವು ಬೆಳೆದ ರೈತರ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಪಮಾನ ಏರಿಕೆಯಿಂದಾಗಿ ಮರದಲ್ಲಿ ಕಾಯಿಗಟ್ಟ ಬೇಕಿದ್ದ ಹೂಗಳು, ಸಣ್ಣ ಕಾಯಿಗಳು ಬಿಸಿಲಿನ ಝಳಕ್ಕೆ ಉದುರಿ ಹೋಗುತ್ತಿವೆ. ಜೊತೆಗೆ ಕೀಟಗಳ ಸಮಸ್ಯೆ ಸಹ ಮಾವಿಗೆ ಆವರಿಸಿದೆ.

ಜಿಲ್ಲೆಯಲ್ಲಿ ಒಟ್ಟು 30 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಮಾವು ಬೆಳೆಯಲಾಗುತ್ತಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿನ ತೀವ್ರ ತಾಪಮಾನದಿಂದ ಹೂಗಳೆಲ್ಲ ಉದುರಿ 90% ಇಳುವರಿ ಕುಸಿದಿದ್ದು 10% ರಷ್ಟು ಮಾತ್ರ ಇಳುವರಿಯಾಗಿದೆ. ಅದೂ ಕೂಡಾ ಬಿಸಿಲಿಗೆ ಒಣಗಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲೂ ಕೊಂಡುಕೊಳ್ಳುವವರಿಲ್ಲದೇ ಬೇಡಿಕೆ ಕುಸಿತ ಕಂಡಿದೆ.

ಈ ಬಗ್ಗೆ ಸಮೀಕ್ಷೆ ಮಾಡಿರುವ ಜಿಲ್ಲಾಡಳಿತ 400ಕೋಟಿ ರೂ. ಮೌಲ್ಯದ ಮಾವು ಬೆಳೆ ನಾಶ ಆಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೂ ಮಾವು ಬೆಳೆಗೆ ವಿಮೆ ನೀಡಲು ವಿಮಾ ಕಂಪನಿಗಳು ಹಿಂದೇಟು ಹಾಕಿವೆ. ಉಷ್ಣಾಂಶದಿಂದ ಬೆಳೆ ನಾಶವಾಗಿರೋದಕ್ಕೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿರುವುದು ಮಾವು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |
July 20, 2025
3:02 PM
by: ಸಾಯಿಶೇಖರ್ ಕರಿಕಳ
ಬದುಕು ಪುರಾಣ | ರಾಮಬಾಣದ ಇರಿತ
July 20, 2025
7:39 AM
by: ನಾ.ಕಾರಂತ ಪೆರಾಜೆ
ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group