ಕರ್ನಾಟಕದ ಕಲೆಗೆ ಮತ್ತೊಂದು ಗರಿ | ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳ ದೇವಾಲಯಗಳು ಸೇರ್ಪಡೆ

September 19, 2023
9:51 AM
ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ (X)ನಲ್ಲಿ ಪೋಸ್ಟ್‌ ಮಾಡಿದೆ.

ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.

Source : Twitter(X)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror