ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್ (X)ನಲ್ಲಿ ಪೋಸ್ಟ್ ಮಾಡಿದೆ.
ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.
Source : Twitter(X)
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…