ಹವಾಮಾನ ವರದಿ | 03-12-2024 | ಕರಾವಳಿ ಜಿಲ್ಲೆಗಳಲ್ಲಿ ಡಿ. 8 ರ ತನಕ ಅಲ್ಲಲ್ಲಿ ಮಳೆ | ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣ |

December 3, 2024
11:51 AM
ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದೆ ಮತ್ತು ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಈಗಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಡಿ.7 ರ ವೇಳೆಗೆ ಬಂಗಾಳಕೊಲ್ಲಿಯ ನಿಕೋಬಾರ್ ದ್ವೀಪ ಪ್ರದೇಶದಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

04.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈಗಿನ ಮಳೆಯ ವಾತಾವರಣವು ಮಧ್ಯಾಹ್ನ ನಂತರ ಕಡಮೆಯಾಗುವ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 4ರಿಂದ 2 ದಿವಸಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿಸೆಂಬರ್ 8ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿ ಮೋಡದ ವಾತಾವರಣ ಮುಂದುವರಿಯಲಿದ್ದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 6ರಿಂದ ಮತ್ತೆ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ – ದಾವಣಗೆರೆ ಗಡಿ ಭಾಗಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಹಾವೇರಿ, ಧಾರವಾಡ, ಬೆಳಗಾವಿ, ಉಳಿದ ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದೆ ಮತ್ತು ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಆದರೆ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿ ಪರಿಣಾಮದಿಂದ ಹಿಂಗಾರು ರೀತಿಯ ಗುಡುಗು ಮಳೆ ಅಲ್ಲಲ್ಲಿ ಮುಂದುವರಿಯುವ ಲಕ್ಷಣಗಳಿವೆ. ಈಗಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಡಿಸೆಂಬರ್ 7 ರ ವೇಳೆಗೆ ಬಂಗಾಳಕೊಲ್ಲಿಯ ನಿಕೋಬಾರ್ ದ್ವೀಪ ಪ್ರದೇಶದಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror