Advertisement
ವೆದರ್ ಮಿರರ್

ಹವಾಮಾನ ವರದಿ | 30-11-2025 | ರಾಜ್ಯದಲ್ಲಿ ಚಂಡಮಾರುತದ ಪ್ರಭಾವ ಕಡಿಮೆಯಾಯ್ತು… ಹಾಗಿದ್ದರೆ ಮಳೆ ಏನಾಯ್ತು..?

Share

01.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು, ಮಂಗಳೂರು ಹಾಗೂ ಸುರತ್ಕಲ್ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 4 ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, 5 ರಿಂದ ಪೂರ್ವ ದಿಕ್ಕಿನಿಂದ ಮಳೆಯ ಸಾಧ್ಯತೆಗಳಿವೆ. ಆದರೆ ಅದೂ ಸಹ ಬದಲಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, 5 ರಿಂದ ಹಿಂಗಾರು ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ದಿತ್ವಾ ಚಂಡಮಾರುತದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಆದರೆ ಅಲ್ಲಲ್ಲಿ ವಿರಳವಾಗಿ ಹಗುರ ಮೋಡದ ವಾತಾವರಣ ಇರಬಹುದು. ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ) ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಚಿತ್ರದುರ್ಗ, ಜಿಲ್ಲೆಯಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ಮಳೆಯು ಡಿಸೆಂಬರ್ 1 ರಿಂದ ಕಡಿಮೆಯಾಗಿ, ಡಿಸೆಂಬರ್ 2ರಿಂದ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದ್ದು, ಡಿಸೆಂಬರ್ 5ರ ತನಕ ಮುಂದುವರಿಯುವ ಲಕ್ಷಣಗಳಿವೆ.

ದಿತ್ವಾ ಚಂಡಮಾರುತವು ಡಿಸೆಂಬರ್ 2 ರಂದು ಆಂದ್ರದ ನೆಲ್ಲೂರು, ಓಂಗಾಲ್ ನಲ್ಲಿ ದುರ್ಬಲಗೊಂಡು, ಮತ್ತೆ ದಕ್ಷಿಣಕ್ಕೆ ಚಲಿಸಿ ಪುದುಚೆರಿಯ ವಿಲುಪ್ಪುರಂ ನಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5ರಿಂದ 6 ದಿನಗಳವರೆಗೆ ಹಿಂಗಾರು ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

7 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago