ಅಮೆರಿಕದಲ್ಲಿ ತಲೆಎತ್ತಿದ ಅತಿ ದೊಡ್ಡ ಹಿಂದೂ ದೇವಾಲಯ | ನ್ಯೂ ಜೆರ್ಸಿಯಲ್ಲಿ ಬಿಎಪಿಎಸ್‌ ಸ್ವಾಮಿನಾರಾಯಣ ಅಕ್ಷರಧಾಮ ಉದ್ಘಾಟನೆ

October 9, 2023
7:02 PM
ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆ ನಗರದಲ್ಲಿರುವ ಈ ದೇವಾಲಯವು ಆಧುನಿಕ ಯುಗದಲ್ಲಿ ಭಾರತದ ಹೊರಗಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ. ಬಿಎಪಿಎಸ್‌ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.

ಹಿಂದೂಗಳು ಅತೀ ಹೆಚ್ಚು ಇರುವ ದೇಶ ಅಂದ್ರೆ ಅದು ನಮ್ಮ ಭಾರತ. ಹೆಚ್ಚಾಗಿ ಹಿಂದೂ ಸಂಪ್ರದಾಯ ಇಲ್ಲಿ ಆಚರಿಸಲ್ಪಡುತ್ತದೆ. ಹಾಗೆ ಇನ್ನುಳಿದ ಬೇರೆ ಬೇರೆ ಧರ್ಮ, ಮತ, ಜಾತಿಗಳಿಗೂ ಅಷ್ಟೇ ಸ್ವಾತಂತ್ರ್ಯ, ಗೌರವವನ್ನು‌ ನಮ್ಮ ದೇಶ ನೀಡುತ್ತದೆ. ಅದೇ ರೀತಿ ಇತರ ದೇಶಗಳಲ್ಲಿಯೂ ನಮ್ಮ ಧಾರ್ಮಿಕ ಕೇಂದ್ರ ಸ್ಥಾಪನೆ‌ ಮಾಡಿ, ಪೂಜಿಸುವವರಿದ್ದಾರೆ. ಇದೀಗ ಭಾರತದ ಹೊರಗಿನ ಅತಿ ದೊಡ್ಡ ಹಿಂದೂ ದೇವಾಲಯ ಅಮೆರಿಕದಲ್ಲಿ ಉದ್ಘಾಟನೆಗೊಂಡಿದೆ.

Advertisement
Advertisement

ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯವು ಅಮೆರಿಕದ ನ್ಯೂಜೆರ್ಸಿಯಲ್ಲಿ  ಭಕ್ತಾದಿಗಳಿಗಾಗಿ ದೇವರ ದರ್ಶನಕ್ಕೆ ಬಾಗಿಲು ತೆರೆಯಿತು. ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆ ನಗರದಲ್ಲಿರುವ ಈ ದೇವಾಲಯವು ಆಧುನಿಕ ಯುಗದಲ್ಲಿ ಭಾರತದ ಹೊರಗಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ. ಬಿಎಪಿಎಸ್‌ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ‘ವಿಶ್ವದಾದ್ಯಂತ ಅಪಾರ ಸಂಖ್ಯೆಯ ಭಕ್ತರಿಗೆ ಇದು ಆಧ್ಯಾತ್ಮಿಕ ಮಹತ್ವದ ಸಂದರ್ಭವಾಗಿದೆ’ ಎಂದು ಮೋದಿ ಬಣ್ಣಿಸಿದ್ದಾರೆ.

Advertisement

ಈ ದೇವಾಲಯವನ್ನು ಇಟಲಿ ಮತ್ತು ಬಲ್ಗೇರಿಯಾದ ವಿಧದ ಅಮೃತಶಿಲೆಯಿಂದ ರಚಿಸಲಾಗಿದೆ. ಈ ವಾಸ್ತುಶಿಲ್ಪದ ದೇವಾಲಯವು ವಿಶಾಲವಾದ 126 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ದೇವಾಲಯದ ಗೋಡೆಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಅಬ್ರಹಾಂ ಲಿಂಕನ್ ಸೇರಿದಂತೆ ಐತಿಹಾಸಿಕ ವ್ಯಕ್ತಿಗಳ ಪ್ರತಿರೂಪವನ್ನು ಕೆತ್ತನೆ ಮಾಡಲಾಗಿದೆ ಎಂದು ದೇವಾಲಯದ ಸ್ವಯಂಸೇವಕ ಮತ್ತು ಕೊಲಂಬಿಯಾ ವಿಶ್ವವಿದ್ಯಾನಿಲಯದ ಧಾರ್ಮಿಕ ವಿದ್ವಾಂಸ ಯೋಗಿ ತ್ರಿವೇದಿ ತಿಳಿಸಿದ್ದಾರೆ.

2011 ರಲ್ಲಿ ಅಕ್ಷರಧಾಮ ದೇವಾಲಯ ನಿರ್ಮಾಣ ಕಾರ್ಯ ಪ್ರಾರಂಭವಾಯಿತು. ಪ್ರಪಂಚದಾದ್ಯಂತದ 12,500 ಸ್ವಯಂಸೇವಕರು ಈ ದೇವಾಲಯವನ್ನು ನಿರ್ಮಿಸಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |
May 18, 2024
12:18 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror