ಹಿಂದೂಗಳು ಅತೀ ಹೆಚ್ಚು ಇರುವ ದೇಶ ಅಂದ್ರೆ ಅದು ನಮ್ಮ ಭಾರತ. ಹೆಚ್ಚಾಗಿ ಹಿಂದೂ ಸಂಪ್ರದಾಯ ಇಲ್ಲಿ ಆಚರಿಸಲ್ಪಡುತ್ತದೆ. ಹಾಗೆ ಇನ್ನುಳಿದ ಬೇರೆ ಬೇರೆ ಧರ್ಮ, ಮತ, ಜಾತಿಗಳಿಗೂ ಅಷ್ಟೇ ಸ್ವಾತಂತ್ರ್ಯ, ಗೌರವವನ್ನು ನಮ್ಮ ದೇಶ ನೀಡುತ್ತದೆ. ಅದೇ ರೀತಿ ಇತರ ದೇಶಗಳಲ್ಲಿಯೂ ನಮ್ಮ ಧಾರ್ಮಿಕ ಕೇಂದ್ರ ಸ್ಥಾಪನೆ ಮಾಡಿ, ಪೂಜಿಸುವವರಿದ್ದಾರೆ. ಇದೀಗ ಭಾರತದ ಹೊರಗಿನ ಅತಿ ದೊಡ್ಡ ಹಿಂದೂ ದೇವಾಲಯ ಅಮೆರಿಕದಲ್ಲಿ ಉದ್ಘಾಟನೆಗೊಂಡಿದೆ.
ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯವು ಅಮೆರಿಕದ ನ್ಯೂಜೆರ್ಸಿಯಲ್ಲಿ ಭಕ್ತಾದಿಗಳಿಗಾಗಿ ದೇವರ ದರ್ಶನಕ್ಕೆ ಬಾಗಿಲು ತೆರೆಯಿತು. ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆ ನಗರದಲ್ಲಿರುವ ಈ ದೇವಾಲಯವು ಆಧುನಿಕ ಯುಗದಲ್ಲಿ ಭಾರತದ ಹೊರಗಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ. ಬಿಎಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ‘ವಿಶ್ವದಾದ್ಯಂತ ಅಪಾರ ಸಂಖ್ಯೆಯ ಭಕ್ತರಿಗೆ ಇದು ಆಧ್ಯಾತ್ಮಿಕ ಮಹತ್ವದ ಸಂದರ್ಭವಾಗಿದೆ’ ಎಂದು ಮೋದಿ ಬಣ್ಣಿಸಿದ್ದಾರೆ.
ಈ ದೇವಾಲಯವನ್ನು ಇಟಲಿ ಮತ್ತು ಬಲ್ಗೇರಿಯಾದ ವಿಧದ ಅಮೃತಶಿಲೆಯಿಂದ ರಚಿಸಲಾಗಿದೆ. ಈ ವಾಸ್ತುಶಿಲ್ಪದ ದೇವಾಲಯವು ವಿಶಾಲವಾದ 126 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ದೇವಾಲಯದ ಗೋಡೆಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಅಬ್ರಹಾಂ ಲಿಂಕನ್ ಸೇರಿದಂತೆ ಐತಿಹಾಸಿಕ ವ್ಯಕ್ತಿಗಳ ಪ್ರತಿರೂಪವನ್ನು ಕೆತ್ತನೆ ಮಾಡಲಾಗಿದೆ ಎಂದು ದೇವಾಲಯದ ಸ್ವಯಂಸೇವಕ ಮತ್ತು ಕೊಲಂಬಿಯಾ ವಿಶ್ವವಿದ್ಯಾನಿಲಯದ ಧಾರ್ಮಿಕ ವಿದ್ವಾಂಸ ಯೋಗಿ ತ್ರಿವೇದಿ ತಿಳಿಸಿದ್ದಾರೆ.
2011 ರಲ್ಲಿ ಅಕ್ಷರಧಾಮ ದೇವಾಲಯ ನಿರ್ಮಾಣ ಕಾರ್ಯ ಪ್ರಾರಂಭವಾಯಿತು. ಪ್ರಪಂಚದಾದ್ಯಂತದ 12,500 ಸ್ವಯಂಸೇವಕರು ಈ ದೇವಾಲಯವನ್ನು ನಿರ್ಮಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…