ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್ಜಾಯ್ ಚಂಡಮಾರುತವು ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಇದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಂಡು ಬರುತ್ತಿದೆ. ಕೇರಳ, ಕರ್ನಾಟಕ ಮತ್ತು ಗೋವಾ ಮೂಲಕ ಹಾದು ಹೋದ ನಂತರ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಚಂಡಮಾರುತದ ಪ್ರಭಾವ ಕಂಡುಬರುತ್ತಿದೆ. ಚಂಡಮಾರುತ ಬಿಪರ್ಜಾಯ್ ಜೂನ್ 15 ರ ಸಂಜೆ ಸೌರಾಷ್ಟ್ರ ಮತ್ತು ಕಚ್ ತೀರಗಳನ್ನು ದಾಟುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಬಿಪರ್ಜಾಯ್ ಚಂಡಮಾರುತಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel