ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

July 15, 2025
9:31 PM

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ. ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ ಎಂದು ಪುನರುಚ್ಚರಿಸಿದ್ದಾರೆ. ಹೃದಯಾಘಾತದ ರೋಗ ಲಕ್ಷಣಗಳು ಇದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಕ್ಕಳಲ್ಲಿ ಸ್ಕ್ರೀನಿಂಗ್ ಮಾಡುವ ಆಗತ್ಯವಿಲ್ಲ. ರಸ್ತೆ ಬದಿ ಆಹಾರ ಮತ್ತು ಆಹಾರ ತಯಾರಿಸುವ ವಿಧಾನದ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ
ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ
October 23, 2026
10:30 AM
by: ದ ರೂರಲ್ ಮಿರರ್.ಕಾಂ
ಕಾಡಿನ ನಡಿಗೆ – ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಚೈತನ್ಯ..!
October 23, 2026
7:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror