ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ ಶೇಕಡ 5.3 ಕ್ಕೆ ತಗ್ಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಈ ಹಿಂದೆ 34 ಕೋಟಿ 44 ಲಕ್ಷ ಜನರು ಕಡು ಬಡತನದಲ್ಲಿದ್ದರು. ವಿಶ್ವ ಬ್ಯಾಂಕ್ ಅಧ್ಯಯನದ ಪ್ರಕಾರ, 26 ಕೋಟಿ ಜನರು ಕಡುಬಡತನದಿಂದ ಹೊರ ಬಂದಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆ ಮುಖಾಂತರ ಅನೇಕ ಜನರಿಗೆ ಉದ್ಯೋಗ ದೊರೆತಿದ್ದು, ಬಡತನದಿಂದ ಹೊರ ಬಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…