ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ ಶೇಕಡ 5.3 ಕ್ಕೆ ತಗ್ಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಈ ಹಿಂದೆ 34 ಕೋಟಿ 44 ಲಕ್ಷ ಜನರು ಕಡು ಬಡತನದಲ್ಲಿದ್ದರು. ವಿಶ್ವ ಬ್ಯಾಂಕ್ ಅಧ್ಯಯನದ ಪ್ರಕಾರ, 26 ಕೋಟಿ ಜನರು ಕಡುಬಡತನದಿಂದ ಹೊರ ಬಂದಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆ ಮುಖಾಂತರ ಅನೇಕ ಜನರಿಗೆ ಉದ್ಯೋಗ ದೊರೆತಿದ್ದು, ಬಡತನದಿಂದ ಹೊರ ಬಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡ 41 ಮಂದಿ ಬೆಂಗಳೂರಿನ ನಾರಾಯಣ…
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ನವೆಂಬರ್ 11 ಕೊನೆಯ ದಿನವಾಗಿದೆ. ಇನ್ನೂ…
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ…
ಹವಾಮಾನ ವೈಪರೀತ್ಯದಿಂದ ಖಾರಿಫ್ ಬೆಳೆಗಳ ಇಳುವರಿ ಕುಸಿದಿರುವ ಹಿನ್ನೆಲೆಯಲ್ಲಿ ದೇಶದ ಬಹುತೇಕ ಕೃಷಿ…
ನವೆಂಬರ್ 11ರಂದು ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್…