ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 217 ಕ್ಕೆ ಏರಿಕೆಯಾಗಿದೆ. 28 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು 143 ಜನರು ಗಾಯಗೊಂಡಿದ್ದಾರೆ.
ನೆರೆಪೀಡಿತ ಪ್ರದೇಶಗಳಾದ್ಯಂತ ಹುಡುಕಾಟ ಹಾಗೂ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಹೆಚ್ಚಿಸಲಾಗಿದೆ. ಗಾಯಾಳುಗಳು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭೂಕುಸಿತದಿಂದ ಮುಚ್ಚಿಹೋಗಿರುವ ಪ್ರಮುಖ ರಸ್ತೆಗಳನ್ನು ಮತ್ತೆ ತೆರೆಯುವ ಪ್ರಯತ್ನಗಳು ನಡೆಯುತ್ತಿವೆ. ಕಠ್ಮಂಡುವಿನಿಂದ ಹೊರಡುವ ಹೆಚ್ಚಿನ ಹೆದ್ದಾರಿಗಳು ಮಣ್ಣು ಹಾಗೂ ಮರಗಳಿಂದ ಮುಚ್ಚಿದೆ. ತೆರವು ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್ 27 ಮತ್ತು 28 ರಂದು ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರಿಗಾಗಿ ಸರ್ಕಾರವು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.
ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಬಗ್ಗೆ ಮಾಹಿತಿ ಪಡೆದಿದೆ ಎಂದು ವರದಿ ಮಾಡಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…