ಸೂರ್ಯನ ಪ್ರಖರತೆಗೆ ಬಳಲಿ ಬೆಂಡಾದ ಜನತೆ : ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ತಾಪಮಾನ

April 14, 2023
1:34 PM

ಈ ವರ್ಷ ರಾಜ್ಯಾದ್ಯಂತ ಹಿಂದೆಂದೂ ಕಾಣದ ಸೂರ್ಯನ ಶಾಖದ ಪ್ರಖರತೆ ಮಾರ್ಚ್ ನಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇನ್ನೂ ಈ ಪ್ರಖರತೆ ಜೂನ್ ಎರಡನೇ ವಾರದ ವರೆಗೂ ಮುಂದುವರೆಯುವುದರಿಂದ ಖಂಡಿತವಾಗಿ ನಾವು ಕೆಲವೊಂದು ವ್ಯವಸ್ಥೆಗಳನ್ನು ಮಾಡಿಕೊಳ್ಳಲೇಬೇಕಿದೆ. ಇಲ್ಲವಾದರೆ ವಯಸ್ಕರು ಮಕ್ಕಳು ವಯೋವೃದ್ಧರು ಎಲ್ಲರೂ ಜೀವಕ್ಕೆ ಅಪಾಯ ತಂದುಕೊಳ್ಳಬೇಕಾದೀತು,ಮಕ್ಕಳಲ್ಲಿ Dehydration ವೃದ್ಧರಲ್ಲಿ Sun stroke ಮಧ್ಯವಯಸ್ಕರಲ್ಲಿ ವಿಪರೀತ ತಲೆನೋವು ಹೆಚ್ಚಾಗುತ್ತದೆ.ಆದ್ದರಿಂದ ನಾನು ಕೆಳಗೆ ಸೂಚಿಸುವಂತೆ ಈ ಬೇಸಿಗೆಯಲ್ಲಿ ತಮ್ಮನ್ನು ತಾವು ಕಾಪಾಡಿಕೊಳ್ಳಿ

Advertisement

1) ಗೃಹಿಣಿಯರು ನಿಮ್ಮ ಹೊರಗಿನ ಕೆಲಸಗಳು ಏನಾದ್ರು ಇದ್ರೆ ಸಂಜೆ ವೇಳೆಯಲ್ಲಿ ಮುಗಿಸಿಕೊಳ್ಳಿ
2) ಬಿಸಿಲಿನಲ್ಲಿ ಹೊರ ಹೋಗಲೇ ಬೇಕಾದ ಅನಿವಾರ್ಯತೆ ಇದ್ದಲ್ಲಿ ಬಿಳಿ ಬಣ್ಣದ ಛತ್ರಿಯನ್ನು ಬಳಸಿ
3) ಬಿಸಿಲಿನ ಪ್ರಖರತೆಯನ್ನು ಕಪ್ಪು ಮತ್ತು ನೀಲಿ ಬಣ್ಣ ಬೇಗ ಹೀರುವುದರಿಂದ ಕಪ್ಪು ಮತ್ತು ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
4) ಸಾಧ್ಯವಾದಷ್ಟೂ ಕಾಟನ್ ಬಟ್ಟೆಗಳನ್ನು ಧರಿಸಿ
5) ವಯೋವೃದ್ಧರಿಗೆ ಮತ್ತು ಮಕ್ಕಳಿಗೆ ಮನೆಯಲ್ಲಿ ಹೆಚ್ಚು ಹೆಚ್ಚು ನೀರು ಕುಡಿಯಲು ಕೊಡಿ
6) ಈ ಬಿಸಿಲಿನಲ್ಲಿ ವಿಟಮಿನ್ “ಸಿ” ಕೊರತೆ ಎದುರಾಗುವುದರಿಂದ ಪ್ರಕೃತಿಯ ಅಮೂಲ್ಯ ಕೊಡುಗೆ ನಿಂಬೆಹಣ್ಣಿನ ಪಾನಕ ಮಾಡಿಕೊಂಡು ಕುಡಿಯಿರಿ. ಇಲ್ಲಿ‌ ಸಕ್ಕರೆ ಬದಲು ಬೆಲ್ಲವನ್ನು ಬಳಸಿದರೆ ಒಳ್ಳೆಯದು.
7) ಬೆಳಗ್ಗೆ ಎದ್ದ ತಕ್ಷಣ “ತುಳಸಿ” ಎಲೆಗಳನ್ನು Mixi ಯಲ್ಲಿ ರುಬ್ಬಿಕೊಂಡು ಎರಡು ಲೋಟದಷ್ಟು ನೀರನ್ನು ಬೆರೆಸಿ ಕುಡಿಯಿರಿ ಇದರಿಂದ ಕೆಲಸ ಮಾಡುವಾಗ ಸುಸ್ತಾಗುವುದು ಕಡಿಮೆಯಾಗುತ್ತದೆ.
8 ) ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬೇಡಿ,ಇಲ್ಲವಾದರೆ ಗುದದ್ವಾರದಲ್ಲಿ ಉಷ್ಣತೆ ಹೆಚ್ಚಾಗಿ ಮಲವಿಸರ್ಜನೆಗೆ ತೊಂದರೆ ಜೊತೆಗೆ ಪೈಲ್ಸ್ ಬರುವ ಸಾಧ್ಯತೆ ಹೆಚ್ಚು ಕಾಣಿಸಿಕೊಳ್ಳಬಹುದು.
8 ) ಈ ಸಮಯದಲ್ಲಿ ತಲೆ ಮತ್ತು ಮೆದುಳು ತಂಪಾಗಿರಬೇಕು. ಆದ್ದರಿಂದ ಮಕ್ಕಳಿಗೆ ಎರಡು ದಿನಕ್ಕೊಮ್ಮೆ ಕೊಬ್ಬರಿ ಎಣ್ಣೆ ಬದಲು ರಾತ್ರಿ ಮಲಗುವಾಗ “ಹರಳೆಣ್ಣೆ” ಹಚ್ಚಿ ಬೆಳಗ್ಗೆ ಸ್ನಾನ ಮಾಡಿಸಿ. ವಯಸ್ಕರೂ ಇದನ್ನು ಅನುಸರಿಸಿದರೆ ಉತ್ತಮ.
9) ರಾತ್ರಿ ಮಲಗುವ ಮೊದಲು ತಣ್ಣೀರಿನ ಬಟ್ಟೆಯಿಂದ ನೆಲವನ್ನು ಒರೆಸಿಕೊಂಡು ತೆಳುವಾದ ಬಟ್ಟೆಯ ಮೇಲೆ ಮಲಗುವುದು ಸೂಕ್ತ. ಹಾಸಿಗೆ ಕೂಡ ಈ ಸಮಯದಲ್ಲಿ ಉಷ್ಣ ಹೆಚ್ಚು ಮಾಡುತ್ತದೆ.
10) ಹೆಸರು ಕಾಳುಗಳನ್ನು ನೀರಿನಲ್ಲಿ ಅರ್ಧ ಗಂಟೆಯಷ್ಟು ನೆನಸಿಟ್ಟು ನಂತರ ಮಿಕ್ಸಿಯಲ್ಲಿ ಜ್ಯೂಸ್ ಮಾಡಿಕೊಂಡು
ದಿನಕ್ಕೆರಡು ಬಾರಿ ಕುಡಿಯಿರಿ ಇದರಿಂದ ದೇಹ ತಂಪಾಗಿರುತ್ತದೆ
11 ) ಬಾಣಂತಿ ಹೆಣ್ಣು ಮಕ್ಕಳು ಕಾಯಿಸಿ ಆರಿಸಿದ ನೀರನ್ನೇ ಕುಡಿಯಬೇಕು ಇಲ್ಲವಾದರೆ ತಾಯಿ ಮತ್ತು ಮಗುವಿಗೆ ಯಾವುದೇ ಸೋಂಕು ತಗುಲಬಹುದು
12) ಈ ಸಮಯದಲ್ಲಿ ಮೊಸರಿನ ಬದಲು ಕಡೆದ ಮಜ್ಜಿಗೆಯನ್ನು ಆಹಾರಕ್ಕೆ ಬಳಸಿ,ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವುದರಿಂದ ಅಸಿಡಿಟಿ ಆಗುವುದಿಲ್ಲ
13) 5 ವರ್ಷದ ಒಳಗಿನ ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಒಂದು ಚಿಟಿಕೆಯಷ್ಟು ಅಯೋಡಿನ್ ಉಪ್ಪು ಬೆರೆಸಿದ ನೀರನ್ನು ಕುಡಿಸುತ್ತಿರಬೇಕು ಇದರಿಂದ ಮಕ್ಕಳನ್ನು Dehydration ನಿಂದ ಕಾಪಾಡಿಕೊಳ್ಳಬಹುದು
14) ಈ ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಕ್ಷೇಮ, ದಿನಕ್ಕೆರಡು ಬಾರಿ ಅಂದರೆ ಸಂಜೆ ಅಥವಾ ರಾತ್ರಿ ಮಲಗುವ ಮುನ್ನ ಒಂದು ಬಕೆಟ್ ತಣ್ಣೀರಿಗೆ ಕನಿಷ್ಠ 10 ಪುದಿನ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ತಣ್ಣೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಬೆವರಿನ ದುರ್ಗಂಧ ದೂರವಾಗುವುದಲ್ಲದೇ ಬೆವರು ಗುಳ್ಳೆಗಳು ಚರ್ಮದ ಮೇಲೆ ಬರುವುದಿಲ್ಲ
15) ಬಿಗಿಯಾದ ಒಳ ಉಡುಪುಗಳನ್ನು ಕಡ್ಡಾಯವಾಗಿ ಬಳಸಬೇಡಿ,ಇದರಿಂದ ರಕ್ತ ಸಂಚಾರಕ್ಕೂ ತೊಂದರೆಯಾಗುತ್ತದೆ ಪರಿಣಾಮ ಕಡಿಮೆ ರಕ್ತದೊತ್ತಡ ಅಥವಾ ಹೆಚ್ಚಿನ ರಕ್ತದೊತ್ತಡ ಆಗಿ ಮಾರಣಾಂತಿಕ ಆಗಬಹುದು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ
ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |
April 4, 2025
1:10 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group