ಆಯುಧ ಪೂಜೆ -ವಿಜಯದಶಮಿ ಸಂಭ್ರಮ | ಹೂವು, ಹಣ್ಣು ಖರೀದಿ ಜೋರು | ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆ |

October 10, 2024
10:31 PM

ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.

ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು  ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು  ಜನರು  ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ.  ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror