ಕಾಫಿ ಬೆಳೆಗಾರರ ಸಾಲ ವಸೂಲಾತಿಗೆ ಕೆಲ ರಾಷ್ಟ್ರೀಕೃತ ಬ್ಯಾಂಕುಗಳು ಕಾಫಿ ಕೃಷಿಯ ಭೂಮಿಯನ್ನು ಆನ್‌ಲೈನ್ ಮೂಲಕ ಹರಾಜು ಹಾಕಲು ನಿರ್ಧರಿಸಿದ್ದು, ಕೂಡಲೇ ಇದನ್ನು ಸ್ಥಗಿತಗೊಳಿಸಬೇಕೆಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕುಗಳು ಸಾಲಗಾರರ ಭೂಮಿಯನ್ನು ಸರ್ಫೈಸಿ ಕಾಯ್ದೆ ಪ್ರಕಾರ ಅನ್‌ಲೈನ್ ಮೂಲಕ ಹರಾಜು ಹಾಕಲು ದಿನಾಂಕ ನಿಗದಿ ಮಾಡಿವೆ. ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಕೂಡಲೇ ಹರಾಜು ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…