ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ ಅದು ಸಹಕಾರಿ ಮಾದರಿ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಏರ್ಪಡಿಸಿದ್ದ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಜನರ ಕಲ್ಯಾಣವನ್ನು ಖಾತರಿಪಡಿಸದ ಹೊರತು, ಯಾವುದೇ ದೇಶ ಆರ್ಥಿಕ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.ತಳಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಎಡಿಸಿ ಬ್ಯಾಂಕ್ ಮತ್ತು ಅಮುಲ್ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳ ಕೊಡುಗೆ ಅಪಾರವಾದುದು ಎಂದು ಪ್ರಶಂಸಿದರು. ಮುಂಬರುವ ದಿನಗಳಲ್ಲಿ ಸಹಕಾರಿ ವಲಯದ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…