ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಆರೆಸ್ಸೆಸ್ಗೆ ಜಮೀನು ಮಂಜೂರು ಮಾಡಿದ್ದನ್ನು ತಡೆ ಹಿಡಿದಿರುವ ಬಗ್ಗೆ ಸದನದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣಬೈರೇ ಗೌಡ, ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಬಿಜೆಪಿಯಿಂದ ಆರೆಸ್ಸೆಸ್ ಮೂಲದ ಜನ ಸೇವಾ ಟ್ರಸ್ಟ್‌ಗೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ 35.33 ಎಕರೆ ಗೋಮಾಳ ಭೂಮಿ ಮಂಜೂರು ಮಾಡಲಾಗಿತ್ತು. ಇದೀಗ ಮುಖ್ಯಮಂತ್ರಿ ಗಳ ಸೂಚನೆ ಮೇರೆಗೆ ಮಂಜೂರು ತಡೆ ಹಿಡಿದಿರುವ ಬಗ್ಗೆ ಮಾಹಿತಿ ನೀಡಿದರು.
ಜಮೀನು ತಡೆ ಹಿಡಿದಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಆ ಮೂಲಕ ಗೋಮಾಳದ ಭೂಮಿಯನ್ನು ಆರೆಸ್ಸೆಸ್ ನೀಡಲು ನಿರ್ಧರಿಸಿದ್ದ ಬಿಜೆಪಿಗೆ ಮುಖಭಂಗ ಉಂಟಾಗಿದೆ.
(Source:net)
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel