ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ | ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿಕೆ

December 14, 2024
2:19 PM

ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು, ಮುಂಗಾರು ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿದ್ದಾರೆ. 

Advertisement

ಮಳೆ ಹಾನಿ ಕುರಿತು ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಮಳೆ ಸಂಬಂಧಿಸಿದ ಅವಘಡಗಳಿಂದ 133 ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷದಂತೆ ಈವರೆಗೆ 6.64 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಾನುವಾರು ಪ್ರಾಣ ಹಾನಿ ಕಡಿಮೆ ಇದೆ. ಆದರೂ 714  ಸಣ್ಣ, ದೊಡ್ಡ ಜಾನುವಾರುಗಳು  ಪ್ರಾಣ ಕಳೆದುಕೊಂಡಿದ್ದು, ಅವುಗಳ ವಾರಸುದಾರರಿಗೆ 1.2 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು. ಮುಂಗಾರಿನಲ್ಲಿ 1 ಲಕ್ಷದ 59 ಸಾವಿರದ 718 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 94,94 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹಿಂಗಾರಿನಲ್ಲಿ 1 ಲಕ್ಷ 45 ಸಾವಿರ 254 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 112 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. 20 ಸಾವಿರದ 893 ಮನೆಗಳು ಹಾನಿಯಾಗಿದ್ದು, 82.80 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಈ ವರ್ಷ ಒಟ್ಟಾರೆ 297 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಎಂದರು.

ರಸ್ತೆ, ಶಾಲೆ, ಅಂಗನವಾಡಿ ಕೊಠಡಿಗಳು ವಿದ್ಯುತ್, ಮೂಲಸೌಕರ್ಯಕ್ಕೂ ಹಾನಿಯಾಗಿದೆ. ತುರ್ತು ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 579 ಕೋಟಿ ರೂಪಾಯಿ ಹಣ ಇದೆ. ಪ್ರಕೃತಿ ವಿಕೋಪಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆನ್ನುವ ಬೇಡಿಕೆಯಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದು, ರಾಜಕಾಲುವೆ ಅಭಿವೃದ್ಧಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸದನಕ್ಕೆ ವಿವರವಾಗಿ ಮಾಹಿತಿ ನೀಡಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group