ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು, ಮುಂಗಾರು ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಮಳೆ ಹಾನಿ ಕುರಿತು ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಮಳೆ ಸಂಬಂಧಿಸಿದ ಅವಘಡಗಳಿಂದ 133 ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷದಂತೆ ಈವರೆಗೆ 6.64 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಾನುವಾರು ಪ್ರಾಣ ಹಾನಿ ಕಡಿಮೆ ಇದೆ. ಆದರೂ 714 ಸಣ್ಣ, ದೊಡ್ಡ ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದು, ಅವುಗಳ ವಾರಸುದಾರರಿಗೆ 1.2 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು. ಮುಂಗಾರಿನಲ್ಲಿ 1 ಲಕ್ಷದ 59 ಸಾವಿರದ 718 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 94,94 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹಿಂಗಾರಿನಲ್ಲಿ 1 ಲಕ್ಷ 45 ಸಾವಿರ 254 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 112 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. 20 ಸಾವಿರದ 893 ಮನೆಗಳು ಹಾನಿಯಾಗಿದ್ದು, 82.80 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಈ ವರ್ಷ ಒಟ್ಟಾರೆ 297 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಎಂದರು.
ರಸ್ತೆ, ಶಾಲೆ, ಅಂಗನವಾಡಿ ಕೊಠಡಿಗಳು ವಿದ್ಯುತ್, ಮೂಲಸೌಕರ್ಯಕ್ಕೂ ಹಾನಿಯಾಗಿದೆ. ತುರ್ತು ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 579 ಕೋಟಿ ರೂಪಾಯಿ ಹಣ ಇದೆ. ಪ್ರಕೃತಿ ವಿಕೋಪಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆನ್ನುವ ಬೇಡಿಕೆಯಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದು, ರಾಜಕಾಲುವೆ ಅಭಿವೃದ್ಧಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸದನಕ್ಕೆ ವಿವರವಾಗಿ ಮಾಹಿತಿ ನೀಡಿದರು.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…